ADVERTISEMENT

ಸಮೀಕ್ಷೆಗೆ ಗೈರು: 57 ಸಿಬ್ಬಂದಿಗೆ ನೋಟಿಸ್

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2025, 5:07 IST
Last Updated 29 ಸೆಪ್ಟೆಂಬರ್ 2025, 5:07 IST
   

ಲಿಂಗಸುಗೂರು (ರಾಯಚೂರು ಜಿಲ್ಲೆ): ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಗೆ ನಿರಂತರವಾಗಿ ಗೈರಾದ 57  ಸಿಬ್ಬಂದಿಗೆ ತಾಲ್ಲೂಕು ಮಟ್ಟದ ಸಮನ್ವಯ ಸಮಿತಿ ಅಧ್ಯಕ್ಷ, ಉಪ ವಿಭಾಗಾಧಿಕಾರಿ ಬಸವಣೆಪ್ಪ ಕಲಶೆಟ್ಟಿ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದಾರೆ.

‘ತಾಲ್ಲೂಕಿನಲ್ಲಿ ಸಮೀಕ್ಷೆಗೆ ನಿಯೋಜನೆಗೊಂಡ ಸಿಬ್ಬಂದಿ ಪೈಕಿ 57 ಮಂದಿ ಸತತವಾಗಿ ಗೈರಾಗಿದ್ದಾರೆ. ಹಾಜರಾಗಲು ಸೂಚಿಸಿದರೂ ಬಂದಿಲ್ಲ. ನಿರ್ಲಕ್ಷ್ಯದಿಂದಾಗಿ ಸಮೀಕ್ಷಾ ಕಾರ್ಯ ಕುಂಠಿತವಾಗಿದೆ. 24 ಗಂಟೆಯೊಳಗೆ ಸಮಜಾಯಿಷಿ ನೀಡಿ’ ಎಂದು ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT