ADVERTISEMENT

ಬಾಲಕಾರ್ಮಿಕ ಸಮೀಕ್ಷೆ ಕೈಗೊಳ್ಳುವ ಸಮೀಕ್ಷೆದಾರರಿಗೆ ತರಬೇತಿ

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2021, 14:29 IST
Last Updated 22 ಮಾರ್ಚ್ 2021, 14:29 IST
ರಾಯಚೂರಿನ ಕನ್ನಡ ಭವನದಲ್ಲಿ ಸೋಮವಾರ ಏರ್ಪಡಿಸಿದ್ದ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ಸಮೀಕ್ಷೆ ಕೈಗೊಳ್ಳುವ ಸಮೀಕ್ಷೆದಾರರಿಗೆ ತರಬೇತಿ ಕಾರ್ಯಾಗಾರವನ್ನು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಡಾ.ಜಯಶ್ರೀ ಚನ್ನಾಳ್ ಉದ್ಘಾಟಿಸಿದರು
ರಾಯಚೂರಿನ ಕನ್ನಡ ಭವನದಲ್ಲಿ ಸೋಮವಾರ ಏರ್ಪಡಿಸಿದ್ದ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ಸಮೀಕ್ಷೆ ಕೈಗೊಳ್ಳುವ ಸಮೀಕ್ಷೆದಾರರಿಗೆ ತರಬೇತಿ ಕಾರ್ಯಾಗಾರವನ್ನು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಡಾ.ಜಯಶ್ರೀ ಚನ್ನಾಳ್ ಉದ್ಘಾಟಿಸಿದರು   

ರಾಯಚೂರು: ಜಿಲ್ಲೆಯಾದ್ಯಂತ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ಸಮೀಕ್ಷೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಎಲ್ಲಾ ಮಕ್ಕಳನ್ನು ಶಾಲಾ ವ್ಯಾಪ್ತಿಗೆ ತರುವಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಡಾ.ಜಯಶ್ರೀ ಚನ್ನಾಳ್ ಸಲಹೆ ನೀಡಿದರು.

ನಗರದ ಕನ್ನಡ ಭವನದಲ್ಲಿ ಜಿಲ್ಲಾಡಳಿತ, ಕಾರ್ಮಿಕ ಇಲಾಖೆ ಮತ್ತು ಜಿಲ್ಲಾ ಬಾಲಕಾರ್ಮಿಕ ಯೋಜನೆಯಿಂದ ಸೋಮವಾರ ಏರ್ಪಡಿಸಿದ್ದ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರ ಸಮೀಕ್ಷೆ ಕೈಗೊಳ್ಳುವ ಸಮೀಕ್ಷೆದಾರರಿಗೆ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಕೋವಿಡ್-19 ಸೋಂಕಿನಿಂದಾಗಿ ಶಾಲೆಗಳು ಬಾಗಿಲು ಹಾಕಿದ್ದವು, ಶಾಲೆಗಳು ಮುಚ್ಚಿದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಬಾಲಕಾರ್ಮಿಕರಾಗಿದ್ದಾರೆ, ಅಂತಹ ಮಕ್ಕಳನ್ನು ಸರಿಯಾಗಿ ಸಮೀಕ್ಷೆ ಅವರನ್ನು ಶಾಲೆಗಳಿಗೆ ದಾಖಲಿಸುವ ಯತ್ನ ಮಾಡಬೇಕು ಎಂದರು.

ADVERTISEMENT

ಜಿಲ್ಲಾ ಕಾರ್ಮಿಕ ಅಧಿಕಾರಿ ನಾಜಿಯಾ ಸುಲ್ತಾನ್ ಮಾತನಾಡಿ, ಸಮೀಕ್ಷೆ ನಡೆಸುವವರು ಸೂಕ್ತವಾಗಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಬಾಲಕಾರ್ಮಿಕ ಯೋಜನಾಧಿಕಾರಿ ಮಂಜುನಾಥರೆಡ್ಡಿ ಮತ್ತು ಮಕ್ಕಳ ಸಹಾಯವಾಣಿ ಜಿಲ್ಲಾ ಸಂಯೋಜಕ ಸುದರ್ಶನ
ತರಬೇತಿ ನೀಡಿದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಡಾ.ಸೈಯದ್ ಪಾಷಾ, ಸ್ವಯಂ ಸೇವಾ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸಮೀಕ್ಷೆದಾರರು ಪಾಲ್ಗೊಂಡಿದ್ದರು. ಯೋಜನಾ ವ್ಯವಸ್ಥಾಪಕ ರವಿಕುಮಾರ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.