ರಾಯಚೂರು: ‘ಗ್ರಾಮೀಣ ಜನರಲ್ಲಿ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪ್ರತಿ ತಿಂಗಳ ಮೊದಲನೇ ಮತ್ತು ಮೂರನೇ ಶನಿವಾರ ಜಿಲ್ಲೆ, ತಾಲ್ಲೂಕು ಹಾಗೂ ಗ್ರಾಮ ಪಂಚಾಯತಿ ಮಟ್ಟದಲ್ಲಿ ಸ್ವಚ್ಛ ಶನಿವಾರ’ ಶ್ರಮದಾನ ಆಯೋಜಿಸಬೇಕು’ ಎಂದು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕಾಂದೂ ಹೇಳಿದರು.
ಶನಿವಾರ ನಗರದ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಸ್ವಚ್ಛ ಶನಿವಾರ ಶ್ರಮದಾನವನ್ನು ಜಿಲ್ಲಾ ಮಟ್ಟದ ವಿವಿಧ ಯೋಜನೆಯ ಅಧಿಕಾರಿ ಮತ್ತು ಸಿಬ್ಬಂದಿಗಳೊಂದಿಗೆ ಕೈಗೊಂಡು ಅವರು ಮಾತನಾಡಿದರು.
‘ಪ್ರತಿ ತಿಂಗಳು ಜಿಲ್ಲೆ, ತಾಲ್ಲೂಕು ಹಾಗೂ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರತಿ ಮೊದಲನೇ ಮತ್ತು ಮೂರನೇ ಶನಿವಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳು, ಸಂತೆ ಮಾರುಕಟ್ಟೆ, ಧಾರ್ಮಿಕ ಕ್ಷೇತ್ರಗಳಲ್ಲಿ, ರಸ್ತೆ ಹೆದ್ದಾರಿ ಬದಿಗಳಲ್ಲಿ, ಶಾಲೆ, ಅಂಗನವಾಡಿ, ಸರ್ಕಾರಿ ಕಚೇರಿ, ಬಸ್ ನಿಲ್ದಾಣಗಳಲ್ಲಿ ಸ್ವಚ್ಛತಾ ಶ್ರಮದಾನ ಹಮ್ಮಿಕೊಳ್ಳಬೇಕು. ಗ್ರಾಮ ಪಂಚಾಯಿತಿ ಪ್ರತಿನಿಧಿಗಳು, ಅಶಾ, ಅಂಗನವಾಡಿ ಕಾರ್ಯಕರ್ತೆಯರು, ಸ್ವ ಸಹಾಯ ಸಂಘದ ಸದಸ್ಯರು ಕಚೇರಿಯ ಸಿಬ್ಬಂದಿ, ಇತರೆ ಸಂಘ ಸಂಸ್ಥೆಯವರನ್ನು ಒಳಗೊಂಡು ಶ್ರಮದಾನ ಮಾಡಬೇಕು’ ಎಂದರು.
ಜಿ.ಪಂ ಉಪಕಾರ್ಯದರ್ಶಿ ಹಾಲಸಿದ್ದಪ್ಪ ಪೂಜೇರಿ, ಯೋಜನಾ ನಿರ್ದೇಶಕ ಶರಣಬಸವರಾಜ, ಮುಖ್ಯ ಯೋಜನಾಧಿಕಾರಿ ಡಾ.ಟಿ ರೋಣಿ, ಮುಖ್ಯ ಲೆಕ್ಕಾಧಿಕಾರಿ ವಿಜಯಶಂಕರ ಹಾಗೂ ಕಚೇರಿಯ ಸಿಬ್ಬಂದಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.