ರಾಯಚೂರು: ಇಲ್ಲಿಯ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ಟೇಬಲ್ ಟೆನಿಸ್ ಭವನವನ್ನು ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಡಾ.ಶರಣಪ್ರಕಾಶ ಪಾಟೀಲ ಉದ್ಘಾಟಿಸಿದರು.
2023-24ನೇ ಸಾಲಿನ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿಯ ಅನುದಾನದಲ್ಲಿ ₹50 ಲಕ್ಷ ವೆಚ್ಚದಲ್ಲಿ ನಿರ್ಮಿತಿ ಕೇಂದ್ರ ಕಟ್ಟಡವನ್ನು ನಿರ್ಮಿಸಿದೆ.
ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ ಪಾಟೀಲ ಹಾಗೂ ಸಣ್ಣ ನೀರಾವರಿ ಎನ್.ಎಸ್. ಬೋಸರಾಜು ಟೇಬಲ್ ಟೆನಿಸ್ ಆಡಿ ಗಮನ ಸೆಳೆದರು.
ನಗರ ಶಾಸಕ ಡಾ.ಎಸ್.ಶಿವರಾಜ ಪಾಟೀಲ, ಸಂಸದ ಜಿ.ಕುಮಾರ ನಾಯಕ, ಮೇಯರ್ ನರಸಮ್ಮ ನರಸಿಂಹಲು ಮಾಡಗಿರಿ, ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಕೃಷ್ಣ ಶಾವಂತಗೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಣದೀಪ ಡಿ , ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತ ಚೇತನ್ ಆರ್., ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಎಂ.ಸುಂದರೇಶ ಬಾಬು, ಜಿಲ್ಲಾಧಿಕಾರಿ ನಿತೀಶ್ ಕೆ., ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಪಾಂಡ್ವೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ.ಎಂ, ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತ ಜುಬಿನ್ ಮೊಹಪಾತ್ರ, ಕ್ಯಾಷೊಟಕ್ ನಿರ್ಮಿತಿ ಯೋಜನಾ ವ್ಯವಸ್ಥಾಪಕ ವೆಂಕಟೇಶಸಿಂಗ್ ಹಜಾರೆ, ಎಂಜಿನಿಯರ್ ಬಸವರಾಜ ಹಿರೇಮಠ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವೀರೇಶ ನಾಯಕ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.