ರಾಯಚೂರು: ಜಿಲ್ಲಾಡಳಿತದಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಉತ್ತಮ ಕಾರ್ಯಸಾಧನೆಗಾಗಿ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ 2025ನೇ ಸಾಲಿನ ಜಿಲ್ಲಾ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರು ಸಾಧಕರನ್ನು ಸನ್ಮಾನಿಸಿ, ಗೌರವಿಸಿದರು. ರಾಯಚೂರು ತಹಶೀಲ್ದಾರ್ ಸುರೇಶ ವರ್ಮಾ, ಸಿರವಾರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ನಾಗರತ್ನ, ಜಿಲ್ಲಾ ಖಜನೆ ಅಧಿಕಾರಿಗಳ ಕಾರ್ಯಾಲಯದ ಮುಖ್ಯ ಲೆಕ್ಕಾಧಿಕಾರಿ ವೆಂಕಟಾಚಲ, ಮಾನ್ವಿಯ ಆಯುಷ್ಯ ಇಲಾಖೆಯ ವೈದ್ಯಾಧಿಕಾರಿ ಡಾ.ರಾಜೇಂದ್ರ ಬೆನಕನಾಳ, ರಾಯಚೂರು ಶಿಕ್ಷಣಾಧಿಕಾರಿ ಕಚೇರಿ ಪ್ರಥಮ ದರ್ಜೆ ಸಹಾಯಕ ಹನುಮಂತರಾಯ, ಸಿಂಧನೂರು ಗ್ರಂಥಾಲಯ ಇಲಾಖೆಯ ಹಿರಿಯ ಗ್ರಂಥಪಾಲಕ ಯಲ್ಲಪ್ಪ, ದೇವದುರ್ಗ ತಾಲ್ಲೂಕು ಪಂಚಾಯಿತಿ ಪ್ರಥಮ ದರ್ಜೆ ಸಹಾಯಕ ಅಮೀದಾ ಬೇಗಂ, ಮಸ್ಕಿ ತಹಶೀಲ್ದಾರ್ ಕಚೇರಿಯ ಪ್ರಥಮ ದರ್ಜೆ ಸಹಾಯಕ ಗುರುನಾಥ, ಸಾಂಖ್ಯಿಕ ಇಲಾಖೆ ಸಾಂಖ್ಯಿಕ ನಿರೀಕ್ಷಕ ಸಂತೋಷ ನಂದಿನಿ, ಮಾನ್ವಿ ಕೃಷಿ ಇಲಾಖೆಯ ಸಹಾಯಕ ಕೃಷಿ ಅಧಿಕಾರಿ ಯಂಕಣ್ಣ ಯಾದವ್ ಅವರಿಗೆ 2025ನೇ ಸಾಲಿನ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಕೊಡಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.