ADVERTISEMENT

ಸರ್ಕಾರಿ ಯೋಜನೆ ಲಾಭ ಪಡೆಯಿರಿ

ಸಂವಾದ ಕಾರ್ಯಕ್ರಮ: ನ್ಯಾಯಾಧೀಶ ಆನಂದಪ್ಪ ಸಲಹೆ

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2021, 3:48 IST
Last Updated 25 ಅಕ್ಟೋಬರ್ 2021, 3:48 IST
ಸಿಂಧನೂರಿನ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಭಾನುವಾರ ನಡೆದ ದೇವದಾಸಿ ಮಹಿಳೆಯರ ಸ್ಥಿತಿಗತಿ ಕುರಿತ ಸಂವಾದ ಕಾರ್ಯಕ್ರಮವನ್ನು ನ್ಯಾಯಾಧೀಶ ಆನಂದಪ್ಪ ಎಂ. ಉದ್ಘಾಟಿಸಿದರು
ಸಿಂಧನೂರಿನ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಭಾನುವಾರ ನಡೆದ ದೇವದಾಸಿ ಮಹಿಳೆಯರ ಸ್ಥಿತಿಗತಿ ಕುರಿತ ಸಂವಾದ ಕಾರ್ಯಕ್ರಮವನ್ನು ನ್ಯಾಯಾಧೀಶ ಆನಂದಪ್ಪ ಎಂ. ಉದ್ಘಾಟಿಸಿದರು   

ಸಿಂಧನೂರು: ‘ಮಹಿಳೆಯರು ಕೇವಲ ಮನೆಗಷ್ಟೇ ಸೀಮಿತರಾಗಬಾರದು. ಅವರು ಮಕ್ಕಳ ಪಾಲನೆ, ಪೋಷಣೆಯಲ್ಲಿಯೇ ಜೀವನ ಸವೆಸುತ್ತಾರೆ. ಅವರು ಸಹ ಸರ್ಕಾರಿ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು’ ಎಂದು ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಆನಂದಪ್ಪ ಎಂ. ಹೇಳಿದರು.

ಆಜಾದಿ ಕಾ ಅಮೃತ ಮಹೋತ್ಸವದ ಪ್ರಯುಕ್ತ ತಾಲ್ಲೂಕು ಕಾನೂನು ಸೇವಾ ಸಮಿತಿ, ತಾಲ್ಲೂಕು ನ್ಯಾಯವಾದಿಗಳ ಸಂಘ, ಸ್ನೇಹಸಂಸ್ಥೆ ಸಹಯೋಗದಲ್ಲಿ ನಗರದ ತಾಲ್ಲೂಕು ಪಂಚಾಯಿತಿ ಆವರಣದಲ್ಲಿ ಭಾನುವಾರ ನಡೆದ ದೇವದಾಸಿ ಮಹಿಳೆಯರ ಸ್ಥಿತಿಗತಿ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ದುರ್ಬಲರು, ನಿರಾಶ್ರಿತರು, ಗುಂಪು ಘರ್ಘಣೆಗೆ ಸಿಲುಕಿದವರು, ನೊಂದವರು ಕೋರ್ಟಿಗೆ ಬಂದು ಅರ್ಜಿ ನೀಡಿದರೆ ಅವರಿಗೂ ಸಹ ಉಚಿತ ಕಾನೂನು ನೆರವು ನೀಡಲಾಗುವುದು ಎಂದರು.

ADVERTISEMENT

ಬಡವ, ಶ್ರೀಮಂತ ಎನ್ನದೆ ಎಲ್ಲ ವರ್ಗಗಳ ಜನರಿಗೆ ಉಚಿತವಾಗಿ ಕಾನೂನು ನೆರವು ನೀಡುವುದು ಸರ್ಕಾರದ ಉದ್ದೇಶ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ವಕೀಲರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಭೀಮನಗೌಡ ಕೋಳಬಾಳ ಮನವಿ ಮಾಡಿದರು.

ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಕೋಟೆಪ್ಪ ಕಾಂಬ್ಳೆ, ವಕೀಲರ ಸಂಘದ ಕಾರ್ಯದರ್ಶಿ ವೀರೇಶ ಚಿಂಚಿರಕಿ, ಖಜಾಂಚಿ ವೀರಭದ್ರಗೌಡ, ಸಮಾಜ ಕಲ್ಯಾಣ ಅಧಿಕಾರಿ ಮಹಾಲಿಂಗಪ್ಪ, ಸ್ನೇಹಸಂಸ್ಥೆಯ ಸಹ ನಿರ್ದೇಶಕಿ ಕೆ.ಪಿ.ಜಯಾ ಕೂಡ್ಲಿಗಿ ಇದ್ದರು.

ಸ್ನೇಹಸಂಸ್ಥೆಯ ಜಿಲ್ಲಾ ಸಂಯೋಜಕಿ ಸರೋಜ ಹವಳದ, ದೇವದಾಸಿ ಮಹಿಳೆಯರ ಸ್ಥಿತಿಗತಿ ಕುರಿತು ಉಪನ್ಯಾಸ ನೀಡಿದರು.

ವೀರೇಶ ಸಜ್ಜನ್ ಪ್ರಾರ್ಥಿಸಿದರು. ಮಂಜುನಾಥ ನಿರೂಪಿಸಿದರು. ಕಾರ್ಯಕ್ರಮದಲ್ಲಿ ದೇವದಾಸಿ ಮಹಿಳೆಯರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.