ADVERTISEMENT

ಪ್ರತಿಭಾ ಪುರಸ್ಕಾರ ಪ್ರದಾನ ಜೂನ್‌ 1ಕ್ಕೆ

​ಪ್ರಜಾವಾಣಿ ವಾರ್ತೆ
Published 29 ಮೇ 2025, 14:27 IST
Last Updated 29 ಮೇ 2025, 14:27 IST

ರಾಯಚೂರು: ಜಿಲ್ಲಾ ಹಾಗೂ ತಾಲ್ಲೂಕು ಗಾಣಿಗ ಸಮಾಜದಿಂದ ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ವೈದ್ಯಕೀಯ ವಿದ್ಯಾರ್ಥಿಗಳಿಗೆ 2ನೇ ವರ್ಷದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಜೂನ್ 1ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.

ವಿಜಯಪುರದ ಜಯಕುಮಾರ ಸ್ವಾಮೀಜಿ, ಅತನೂರಿನ ಅಭಿನವ ರಾಚೋಟಿವೀರ ಶಿವಾಚಾರ್ಯ, ಕಿಲ್ಲೆಬೃಹನ್ಮಠದ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ, ಮಂಗಳವಾರಪೇಟೆಯ ವೀರಸಂಗಮೇಶ್ವರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ ಎಂದು ಗಾಣಿಗ ಸಮಾಜದ ಜಿಲ್ಲಾ ಅಧ್ಯಕ್ಷ ಚನ್ನಪ್ಪ ಸಜ್ಜನ ಹಾಗೂ ತಾಲ್ಲೂಕು ಘಟಕದ ಅಧ್ಯಕ್ಷ ಬಸಪ್ಪ ಹಳ್ಳಿ ತಿಳಿಸಿದರು.

ಸಣ್ಣ ನೀರಾವರಿ ಸಚಿವ ಎನ್‌.ಎಸ್‌.ಬೋಸರಾಜು ಕಾರ್ಯಕ್ರಮ ಉದ್ಘಾಟಿಸುವರು. ಗಾಣಿಗ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಚನ್ನಪ್ಪ ಸಜ್ಜನ ಅಧ್ಯಕ್ಷತೆ ವಹಿಸುವರು. ಸಂಸದ ಜಿ.ಕುಮಾರನಾಯಕ, ನಗರ ಶಾಸಕ ಶಿವರಾಜ ಪಾಟೀಲ, ಗ್ರಾಮೀಣ ಶಾಸಕ ಬಸನಗೌಡ ದದ್ದಲ್, ವಿಧಾನ ಪರಿಷತ್‌ ಸದಸ್ಯ ಎ.ವಸಂತಕುಮಾರ, ಕೆಪಿಸಿಸಿ ಸದಸ್ಯ ಅಮರಗುಂಡಪ್ಪ ಮೇಟಿ, ಯಾದಗಿರಿ ಉಪ ವಿಭಾಗಾಧಿಕಾರಿ ಹಂಪಣ್ಣ ಸಜ್ಜನ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ನಗರದಲ್ಲಿ ಗುರುವಾರ ಮಾಧ್ಯಮ ಗೋಷ್ಠಿಯಲ್ಲಿ ಹೇಳಿದರು.

ADVERTISEMENT

ಅತಿಥಿಗಳಾಗಿ ವಿಜಯಕುಮಾರ ಸಜ್ಜನ, ದೊಡ್ಡ ಬಾಗೋಡಪ್ಪ, ಅಣ್ಣಾರಾವ್‌ ಪಾಟೀಲ, ಮಲ್ಲಿಕಾರ್ಜುನ ಸಜ್ಜನ, ಬಸವರಾಜ ಸಾಹುಕಾರ, ಬಸವರಾಜಪ್ಪ ಸಜ್ಜನ, ಉಮೇಶ ಸಜ್ಜನ, ಅಮರೇಗೌಡ ಅಗಸಿಮುಂದಿನ ಹಾಗೂ ಲಕ್ಷ್ಮಿ ರಕ್ಕಸಗಿ ಹಾಗೂ ಜಿಲ್ಲೆಯ ಗಾಣಿಕ ಸಮಾಜದ ತಾಲ್ಲೂಕು ಘಟಕಗಳ ಅಧ್ಯಕ್ಷರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಚಂದ್ರಶೇಖರ ಕಲ್ಮಲಾ ಹಾಗೂ ಉಮಾಶಂಕರ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.