ADVERTISEMENT

ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಸಹಕಾರಿ: ಶಿಕ್ಷಣಾಧಿಕಾರಿ ಹೊಂಬಣ್ಣ ರಾಠೋಡ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2024, 14:30 IST
Last Updated 20 ಸೆಪ್ಟೆಂಬರ್ 2024, 14:30 IST
ಲಿಂಗಸುಗೂರಲ್ಲಿ ಶುಕ್ರವಾರ ಆಯೋಜಿಸಿದ್ದ ಕ್ಲಸ್ಟರ್ ಮಟ್ಟದ ಉರ್ದು ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಹೊಂಬಣ್ಣ ರಾಠೋಡ ಉದ್ಘಾಟಿಸಿದರು
ಲಿಂಗಸುಗೂರಲ್ಲಿ ಶುಕ್ರವಾರ ಆಯೋಜಿಸಿದ್ದ ಕ್ಲಸ್ಟರ್ ಮಟ್ಟದ ಉರ್ದು ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಹೊಂಬಣ್ಣ ರಾಠೋಡ ಉದ್ಘಾಟಿಸಿದರು   

ಲಿಂಗಸುಗೂರು: ‘ಪ್ರಾಥಮಿಕ ಮತ್ತು ಪ್ರೌಢಶಾಲಾ ಹಂತದಲ್ಲಿ ಮಕ್ಕಳಲ್ಲಿ ಪಠ್ಯ, ಪಠ್ಯೇತರ ಚಟುವಟಿಕೆಗಳಲ್ಲಿನ ಪ್ರತಿಭೆ ಗುರುತಿಸಲು ಪ್ರತಿಭಾ ಕಾರಂಜಿ ಕಾರ್ಯಕ್ರಮ ಹೆಚ್ಚು ಸಹಕಾರಿ ಆಗಲಿದೆ’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹೊಂಬಣ್ಣ ರಾಠೋಡ ಹೇಳಿದರು.

ಶುಕ್ರವಾರ ಉರ್ದು ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ಮಕ್ಕಳು ಉರ್ದು ಭಾಷೆ ಜೊತೆ ಉಳಿದ ಭಾಷೆಗಳನ್ನು ಕಲಿಯಬೇಕು. ಹಿಂದಿ, ಇಂಗ್ಲೀಷ, ಕನ್ನಡ ಓದು ಬರೆಯಲು ಕಲಿಯಬೇಕು’ ಎಂದರು.

ಕೇತ್ರ ಸಮೂಹ ಸಂಪನ್ಮೂಲ ಅಧಿಕಾರಿ ಹನುಮಂತಪ್ಪ ಕುಳಗೇರಿ, ಪುರಸಭೆ ಮಾಜಿ ಉಪಾಧ್ಯಕ್ಷ ಎಂ.ಡಿ. ರಫಿ ಮಾತನಾಡಿ, ‘ಇತ್ತೀಚಿನ ವರ್ಷಗಳಲ್ಲಿ ಉರ್ದು ಭಾಷೆ ಕಲಿಕೆಗೆ ಹೆಚ್ಚಿನ ಪ್ರೋತ್ಸಾಹ ದೊರೆಯುತ್ತಿದೆ. ಉರ್ದು ಕೇವಲ ಮುಸ್ಲಿಂ ಸಮುದಾಯ ಕಲಿಯಬೇಕಿಲ್ಲ. ಎಲ್ಲರೂ ಕಲಿಯಬೇಕಿದೆ’ ಎಂದರು.

ADVERTISEMENT

ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕ ಅಧ್ಯಕ್ಷ ಹಾಜಿಬಾಬು ಕಲ್ಯಾಣಿ, ಶಿಕ್ಷಣ ಸಂಯೋಜಕ ಬಸವರಾಜ, ಮುಖ್ಯಶಿಕ್ಷಕ ಮುಹಮ್ಮದ್‍ ಮಹಿಬೂಬ, ಸಿ.ಆರ್.ಪಿ ಶೇಕ್‍ ಅಜೀಮ್, ಮುಖಂಡರಾದ ಬಾಬಾಖಾಜಿ, ಫಯಾಜ್‍ ಮಣಿಯಾರ್, ಸೈಯದ್‍ ಯುನೂಸ್‍ ಮುಫ್ತಿ, ರೌಫ್‍ ಗ್ಯಾರಂಟಿ, ಮುಹಮ್ಮದ್‍ ಫ್ರೋಟ್ಸ್, ಇಬ್ರಾಹಿಂ, ಗೌಸ್‍ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.