
ರಾಯಚೂರು: 'ಅರ್ಹ ಶಿಕ್ಷಕರು ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರ ನೋಂದಣಿ ಪ್ರಕ್ರಿಯೆಯಲ್ಲಿ ಭಾಗವಹಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು’ ಎಂದು ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರ ನೋಂದಣಿ ಪ್ರಕ್ರಿಯೆ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರೂ ಆದ ಜಿಲ್ಲಾ ಪಂಚಾಯಿತಿ ಸಿಇಒ ಈಶ್ವರಕುಮಾರ ಕಾಂದೂ ಹೇಳಿದರು.
ಇಲ್ಲಿಯ ಜಿಲ್ಲಾ ಪಂಚಾಯಿತಿ ಕಚೇರಿಯ ಜಲನಿರ್ಮಲ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಸ್ವೀಪ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅರ್ಹತಾ ದಿನಾಂಕ 01.11.2025ಕ್ಕೆ ಅನ್ವಯಸುವಂತೆ ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯನ್ನು ನೂತನವಾಗಿ ಸಿದ್ಧಪಡಿಸಲು ಭಾರತ ಚುನಾವಣಾ ಆಯೋಗವು ಸೂಚನೆ ನೀಡಿದೆ. ನಮೂನೆ 19ರಲ್ಲಿ ಅರ್ಜಿ ಸ್ವೀಕರಿಸಲು ನವಂಬರ್ 6 ಕೊನೆಯ ದಿನವಾಗಿದೆ‘ ಎಂದು ತಿಳಿಸಿದರು.
‘ಕರಡು ಮತದಾರರ ಪಟ್ಟಿಯನ್ನು 25ನೇ ನವೆಂಬರ್ 2025ರಂದು ಪ್ರಕಟಣೆ ಮಾಡಲಾಗುತ್ತದೆ. ನವೆಂಬರ್ 25 ರಿಂದ ಡಿಸೆಂಬರ್ 10ರ ವರೆಗೆ ಹಕ್ಕು ಮತ್ತು ಆಕ್ಷೇಪಣೆಗಳಿಗೆ ಅವಕಾಶ ನೀಡಲಾಗಿದೆ. ಡಿಸೆಂಬರ್ 30ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಣೆ ಮಾಡಲಾಗುವುದು‘ ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಹಾಲಸಿದ್ದಪ್ಪ ಪೂಜಾರಿ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೆ.ಡಿ.ಬಡಿಗೇರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಸೋಮಶೇಖರಪ್ಪ ಹೊಕ್ರಾಣಿ, ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಉಪ ಕುಲಸಚಿವ ಡಾ.ಜಿ.ಎಸ್.ಬಿರಾದಾರ, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಾಯಕ ಕುಲಸಚಿವ ವಿರುಪಣ್ಣ ಕೆ.ಎಂ., ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿಗಳಾದ ಡಾ.ವಾಲ್ಮೀಕಿ ಬಿ ಎಂ., ಇಸಿಒ ರಾಘವೇಂದ್ರ, ಮತದಾರ ಸಾಕ್ಷರತಾ ಕ್ಲಬ್‌ನ ನೋಡಲ್ ಅಧಿಕಾರಿ ದಂಡಪ್ಪ ಬಿರಾದಾರ, ವಾರ್ತಾ ಇಲಾಖೆಯ ವಾರ್ತಾ ಸಹಾಯಕ ಗವಿಸಿದ್ದಪ್ಪ ಹೊಸಮನಿ, ವಿವಿಧ ತಾಲ್ಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.