ADVERTISEMENT

ಪ್ರತಿ ಕ್ಷೇತ್ರದಲ್ಲೂ ಶಿಕ್ಷಕರ ಪಾತ್ರ ಬಹಳ ಮುಖ್ಯ: ಜಿ.ಹಂಪಯ್ಯ ನಾಯಕ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2025, 4:58 IST
Last Updated 15 ಸೆಪ್ಟೆಂಬರ್ 2025, 4:58 IST
ಸಿರವಾರದಲ್ಲಿ ಭಾನುವಾರ ವಿವಿಧ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ತಾಲ್ಲೂಕು ಘಟಕದಿಂದ 2025-26ನೇ ಸಾಲಿನ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿಉತ್ತಮ ಶಿಕ್ಷಕ ಪಡೆದ ನಾಲ್ವರನ್ನು ಬಂಗಾರ ಪದಕ ನೀಡಿ ಗೌರವಿಸಲಾಯಿತು
ಸಿರವಾರದಲ್ಲಿ ಭಾನುವಾರ ವಿವಿಧ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ತಾಲ್ಲೂಕು ಘಟಕದಿಂದ 2025-26ನೇ ಸಾಲಿನ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿಉತ್ತಮ ಶಿಕ್ಷಕ ಪಡೆದ ನಾಲ್ವರನ್ನು ಬಂಗಾರ ಪದಕ ನೀಡಿ ಗೌರವಿಸಲಾಯಿತು   

ಸಿರವಾರ: ಶಿಕ್ಷಕರ ಕೆಲಸ ದೇವರ ಕೆಲಸ. ಶಿಕ್ಷಕರಿಲ್ಲದೇ ಸಮೃದ್ಧ ಸಮಾಜ ನಿರ್ಮಾಣ ಅಸಾಧ್ಯ. ದೇಶದ ಉನ್ನತಿ ಹಾಗೂ ಪ್ರತಿ ಕ್ಷೇತ್ರದಲ್ಲೂ ಎಲ್ಲ ಯಶಸ್ಸಿಗೂ ಶಿಕ್ಷಕರ ಪಾತ್ರವೇ ಬಹಳ ಮಹತ್ವದ್ದಾಗಿದೆ ಎಂದು ಶಾಸಕ ಜಿ.ಹಂಪಯ್ಯ ನಾಯಕ ಅಭಿಪ್ರಾಯಪಟ್ಟರು.

ಪಟ್ಟಣದಲ್ಲಿ ವಿವಿಧ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ತಾಲ್ಲೂಕು ಘಟಕದಿಂದ ಭಾನುವಾರ ನಡೆದ 2025-26ನೇ ಸಾಲಿನ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಉತ್ತಮ ಶಿಕ್ಷಕ ಶಿಕ್ಷಕಿಯರ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶಿಕ್ಷಕರು ಮಕ್ಕಳಿಗೆ ಶಿಕ್ಷಣದ ಜೊತೆಗೆ ಬದುಕುವ ಮಾರ್ಗವನ್ನು ತಿಳಿಸಿಕೊಡುತ್ತಾರೆ ಶಿಕ್ಷಕರ ವೃತ್ತಿ ಬಹಳ ಮಹತ್ವವಾಗಿದೆ ಎಂದರು.

ADVERTISEMENT

ಕಾರ್ಯಕ್ರಮ ಉದ್ಘಾಟಿಸಿ ನವಲಕಲ್ಲು ಬೃಹನ್ಮಠದ ಅಭಿನವಶ್ರೀ ಸೋಮನಾಥ ಶಿವಾಚಾರ್ಯರು ಮಾತನಾಡಿ,‘ಶಿಕ್ಷಣವು ನಮ್ಮ ಜೀವನಕ್ಕೆ ಮಾದರಿಯಾಗುವ ಮಾನವೀಯತೆ ಕಲಿಸಿ ಯಾವುದೇ ಕ್ಷೇತ್ರದಲ್ಲಿಯೂ ಜೀವನ ನಡೆಸಲು ಸಾಧ್ಯ ಎಂಬುದು ಕಲಿಸುವಂತಾಬೇಕಾಗಿದ್ದು, ಅದರೆ ಅದು ಕೇವಲ ಅಂಕಗಳಿಸಲು ಮಾತ್ರ ಸೀಮಿತವಾಗಿದೆ ಎಂದರು.

ಡಾ.ಸರ್ವಪಲ್ಲಿ ರಾಧಕೃಷ್ಣನ್, ಸಾವಿತ್ರಿ ಬಾಯಿಪುಲೆ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಕಾರ್ಯಕ್ರಮ ಉದ್ಘಾಟಿಸಲಾಯಿತು.

ಶಾಸಕ ಜಿ.ಹಂಪಯ್ಯ ನಾಯಕ ಅವರಿಂದ 4 ಜನ ಉತ್ತಮ ಶಿಕ್ಷಕರಿಗೆ ತಲಾ 5 ಗ್ರಾಂ ಬಂಗಾರದ ಚಿನ್ನದ ಪದಕ ನೀಡಿ ಸನ್ಮಾನಿಸಿ ಗೌರವಿಸಲಾಯಿತು.

ತಾಲ್ಲೂಕು ಒಕ್ಕೂಟದಿಂದ ಉತ್ತಮ ಶಿಕ್ಷಕ ಶಿಕ್ಷಕಿಯರರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಿದರು.

ಈ ವೇಳೆ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಜಿಲ್ಲಾ ಸಮಿತಿಯ ಶಾಂತನಗೌಡ ಪಾಟೀಲ ದಿದ್ದಿಗಿ, ಕೇಶವರಡ್ಡಿ, ಟಿ.ಬಸವರಾಜ, ತಾಲ್ಲೂಕು ಘಟಕದ ಅಧ್ಯಕ್ಷ ಪ್ರಕಾಶ ಪಾಟೀಲ, ಪ್ರ.ಕಾರ್ಯದರ್ಶಿ ವಹಾಬ್ ಮೋಸೀನ್, ಮಾಜಿ ಶಾಸಕರಾದ ಬಸನಗೌಡ ಬ್ಯಾಗವಾಟ, ಗಂಗಾಧರ ನಾಯಕ, ಪಟ್ಟಣ ಪಂಚಾಯಿತಿ ಅಧ್ಯಕ್ಷ ವೈ.ಭೂಪನಗೌಡ, ಮುಖಂಡರಾದ ಜೆ.ಶರಣಪ್ಪಗೌಡ, ಚುಕ್ಕಿ ಸೂಗಪ್ಪ ಸಾಹುಕಾರ, ಜಿ.ಲೋಕರಡ್ಡಿ, ಬಿಇಒ ಚಂದ್ರಶೇಖರ ದೊಡ್ಮನಿ, ಸೇರಿದಂತೆ ಪ್ರಶಸ್ತಿ ಪುರಸ್ಕೃತ ಶಿಕ್ಷಕರು ಹಾಗು ವಿವಿಧ ಶಾಲೆಗಳ ಮುಖ್ಯಸ್ಥರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.