ಮಸ್ಕಿ (ರಾಯಚೂರು ಜಿಲ್ಲೆ): ‘ಕಣ್ಣೇ ಅದರಿಂದಿ..’ ಹಾಡಿನಿಂದ ಹೆಚ್ಚು ಜನಪ್ರಿಯತೆ ಪಡೆದಿರುವ ತೆಲುಗು ಸಿನಿಮಾದ ಹಿನ್ನೆಲೆ ಗಾಯಕಿ ಮಂಗ್ಲಿ ಅವರು ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ ಪರ ಚುನಾವಣಾ ಪ್ರಚಾರ ಮಾಡುವುದಕ್ಕೆ ಏಪ್ರಿಲ್ 13 ರಂದು ಮಸ್ಕಿಗೆ ಬರಲಿದ್ದಾರೆ.
ಕನ್ನಡದ ‘ರಾಬರ್ಟ್’ ಚಲನಚಿತ್ರದಲ್ಲಿ ‘ಕಣ್ಣು ಹೊಡೆಯಾಕ್..’ ಎಂಬ ಹಾಡನ್ನು ತೆಲುಗು ಭಾಷೆಯಲ್ಲಿ ಮಂಗ್ಲಿ ಹಾಡಿದ್ದಾರೆ. ಆ ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.