ADVERTISEMENT

ಟಿಇಟಿ: 2397 ಅಭ್ಯರ್ಥಿಗಳು ಹಾಜರು

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2020, 3:40 IST
Last Updated 5 ಅಕ್ಟೋಬರ್ 2020, 3:40 IST
ರಾಯಚೂರಿನ ಸ್ಟೇಷನ್ ರಸ್ತೆಯಲ್ಲಿರುವ ಸರ್ಕಾರಿ ಬಾಲಕಿಯರ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ  ಭಾನುವಾರ ಶಿಕ್ಷಕರ ಅರ್ಹತಾ ಪರೀಕ್ಷೆ ಅಭ್ಯರ್ಥಿಗಳು ಪರೀಕ್ಷೆ ಬರೆದರು
ರಾಯಚೂರಿನ ಸ್ಟೇಷನ್ ರಸ್ತೆಯಲ್ಲಿರುವ ಸರ್ಕಾರಿ ಬಾಲಕಿಯರ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ  ಭಾನುವಾರ ಶಿಕ್ಷಕರ ಅರ್ಹತಾ ಪರೀಕ್ಷೆ ಅಭ್ಯರ್ಥಿಗಳು ಪರೀಕ್ಷೆ ಬರೆದರು   

ರಾಯಚೂರು: ನಗರದಲ್ಲಿ 27 ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಭಾನುವಾರ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ಸ್ಪರ್ಧಾತ್ಮಕ ಪರೀಕ್ಷೆ ನಡೆಯಿತು.

ಟಿಇಟಿ ಪ್ರಥಮ ಪತ್ರಿಕೆ ಪರೀಕ್ಷೆಗಾಗಿ 2,965 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದು, ಇದರಲ್ಲಿ 2397 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಉಳಿದ 568 ಅಭ್ಯರ್ಥಿಗಳು ಗೈರು ಹಾಜರಾಗಿದ್ದಾರೆ. ಮಧ್ಯಾಹ್ನ ನಡೆದ ಟಿಇಟಿ ಎರಡನೇ ಪತ್ರಿಕೆ ಪರೀಕ್ಷೆಗಾಗಿ 6,769 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದರು. 5,933 ಅಭ್ಯರ್ಥಿಗಳು ಹಾಜರಾಗಿ ಉಳಿದ 839 ಅಭ್ಯರ್ಥಿಗಳು ಗೈರುಹಾಜರಾಗಿದ್ದಾರೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಪರೀಕ್ಷೆಯಲ್ಲಿ ಕೋವಿಡ್‌ ಮಾರ್ಗದರ್ಶನಗಳನ್ನು ಪಾಲಿಸಲಾಗಿತ್ತು. ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಗೋನಾಳ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.