ರಾಯಚೂರು: ನವೀಕರಣಗೊಂಡ ಪಂಡಿತ ಸಿದ್ದರಾಮ ಜಂಬಲದಿನ್ನಿ ಜಿಲ್ಲಾ ರಂಗಮಂದಿರದ ಉದ್ಘಾಟನೆ ಕಾರ್ಯಕ್ರಮ ಜ.16ರಂದು ಬೆಳಿಗ್ಗೆ 10:30ಕ್ಕೆ ನಡೆಯಲಿದೆ.
ವೇದಿಕೆ, ಧ್ವನಿ, ಬೆಳಕು, ಆಸನಗಳ ವ್ಯವಸ್ಥೆ ಜತೆಗೆ ಇಡೀ ರಂಗಮಂದಿರದ ಪ್ರೇಕ್ಷಾಗೃಹವು ಹವಾನಿಯಂತ್ರಿತಗೊಂಡಿದೆ.
ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಡಾ.ಶರಣಪ್ರಕಾಶ ಪಾಟೀಲ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಚಿವ ಎನ್.ಎಸ್ ಬೋಸರಾಜು, ಶಿವರಾಜ ತಂಗಡಗಿ ಪಾಲ್ಗೊಳ್ಳಲಿದ್ದಾರೆ. ಶಾಸಕ ಡಾ.ಎಸ್.ಶಿವರಾಜ ಪಾಟೀಲ ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯದ ಹಲವು ಜನಪ್ರತಿನಿಧಿಗಳು, ಅಧಿಕಾರಿಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರದಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.