ADVERTISEMENT

ಗುರುವಿನ ಪಾತ್ರ ಮಹತ್ವದ್ದು: ಶಾಸಕ ವಜ್ಜಲ್

​ಪ್ರಜಾವಾಣಿ ವಾರ್ತೆ
Published 17 ಜೂನ್ 2025, 14:09 IST
Last Updated 17 ಜೂನ್ 2025, 14:09 IST
ಲಿಂಗಸುಗೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಸ್ನೇಹ ಸಮ್ಮೇಳನ ಮತ್ತು ವಿವಿಧ ಘಟಕಗಳ ಸಮಾರೋಪ ಸಮಾರಂಭವನ್ನು ಶಾಸಕ ಮಾನಪ್ಪ ವಜ್ಜಲ್ ಉದ್ಘಾಟಿಸಿದರು
ಲಿಂಗಸುಗೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಸ್ನೇಹ ಸಮ್ಮೇಳನ ಮತ್ತು ವಿವಿಧ ಘಟಕಗಳ ಸಮಾರೋಪ ಸಮಾರಂಭವನ್ನು ಶಾಸಕ ಮಾನಪ್ಪ ವಜ್ಜಲ್ ಉದ್ಘಾಟಿಸಿದರು   

ಲಿಂಗಸುಗೂರು: ‘ವಿದ್ಯಾರ್ಥಿಗಳಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸುವಲ್ಲಿ ಗುರುವಿನ ಪಾತ್ರ ಮಹತ್ವದ್ದು, ಗುರಿ ತಲುಪಲು ಗುರುವಿನ ಮಾರ್ಗದರ್ಶನ ಅಗತ್ಯ’ ಎಂದು ಶಾಸಕ ಮಾನಪ್ಪ ವಜ್ಜಲ್ ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸ್ನೇಹ ಸಮ್ಮೇಳನ ಮತ್ತು ವಿವಿಧ ಘಟಕಗಳ ಸಮಾರೋಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ವಿದ್ಯಾರ್ಥಿಗಳು ಶಿಸ್ತು, ಸಮಯ ಪ್ರಜ್ಞೆ , ಅಚಲ ನಂಬಿಕೆ ಮೈಗೊಡಿಸಿಕೊಂಡು ಉಪನ್ಯಾಸಕರ ಮಾರ್ಗದರ್ಶನದಿಂದ ಗುರಿ ತಲುಪುವತ್ತ ಚಿಂತನೆ ನಡೆಸಬೇಕು. ವಿದ್ಯಾರ್ಥಿಗಳಿಗೆ ಸುಸಜ್ಜಿತ ಕಾಲೇಜು ಕಟ್ಟಡ ನಿರ್ಮಿಸಿ ಅಗತ್ಯ ಸೌಕರ್ಯಗಳನ್ನು ಒದಗಿಸಲಾಗಿದೆ. ಇವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದರು.

ADVERTISEMENT

ಹಟ್ಟಿ ವಿನಾಯಕ ವಿದ್ಯಾ ಸಂಸ್ಥೆಯ ಅಧ್ಯಕ್ಷ ನರಸಪ್ಪ ಯಾದವ, ಕಾಲೇಜಿನ ಪ್ರಾಚಾರ್ಯ ಡಾ.ಹನುಮಂತಪ್ಪ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವೀರನಗೌಡ ಲೆಕ್ಕಿಹಾಳ, ಮಂಡಲ ಅಧ್ಯಕ್ಷ ಅಯ್ಯಪ್ಪ ಮಾಳೂರು, ಹುಲ್ಲೇಶ ಸಾಹುಕಾರ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ನಾರಾಯಣಪ್ಪ, ನಾಗಭೂಷಣ, ಪರಶುರಾಮ ಕೆಂಭಾವಿ, ಭೀಮಸೇನ್ ಕುಲಕರ್ಣಿ, ಅನಂತದಾಸ, ರಾಜು ತಂಬಾಕೆ, ಉಪನ್ಯಾಸಕರಾದ ಗಣೇಶ ದರ್ಬಿ, ಸಿರಾಜ್ ಅಹ್ಮದ್, ಅನುಪಮಾ ಪಾಟೀಲ, ಡಾ.ಮಹಾದೇವಪ್ಪ ನಾಗರಾಳ, ಸಾಂಸ್ಕೃತಿಕ ಸಮಿತಿಯ ಸಂಯೋಜಕಿ ಸರಿತಾ ಇಂಚೂರ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.