ರಾಯಚೂರು: 75ನೇ ಸ್ವಾತಂತ್ರೋತ್ಸವ ಅಮೃತ ಮಹೋತ್ಸವ ಅಂಗವಾಗಿ ನಗರದ ಕರ್ನಾಟಕ ಸಂಘದ ಕಚೇರಿಯಿಂದ ಜಿಲ್ಲಾ ಮಹಾತ್ಮಗಾಂಧಿ ಕ್ರೀಡಾಂಗಣದವರೆಗೆ ಒಂದುಸಾವಿರ ಅಡಿ ಉದ್ದದ ರಾಷ್ಟ್ರ ಧ್ವಜದ ಭವ್ಯ ಮೆರವಣಿಗೆ ಭಾನುವಾರ ಜರುಗಿತು
ಶಾಸಕ ಡಾ.ಶಿವರಾಜ ಪಾಟೀಲ ಮೆರವಣಿಗೆಗೆ ಚಾಲನೆ ನೀಡಿದರು. ಕರ್ನಾಟಕ ಸಂಘದಿಂದ ಹನುಮಾನ್ ಚಿತ್ರ ಮಂದಿರ, ಸದರ್ ಬಜಾರ್ ಪೊಲೀಸ್ ಠಾಣೆ, ತೀನ್ ಖಂದಿಲ್ ವೃತ್ತ, ನಗರಸಭೆ, ಬಸ್ ನಿಲ್ದಾಣದ ಮಾರ್ಗವಾಗಿ ಜಿಲ್ಲಾ ಮಹಾತ್ಮ ಗಾಂಧಿ ಕ್ರೀಡಾಂಗಣದವರೆಗೆ ಭವ್ಯ ಮೆರವಣಿಗೆ ನಡೆಯಿತು.
ಮೆರವಣಿಗೆಯಲ್ಲಿ ನಗರದ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ವಿವಿಧ ಸಂಸಘ ಸಂಸ್ಥೆಗಳ ಮುಖಂಡರು ಭಾಗವಹಿಸಿ ಭಾರತ ಮಾತೆಗೆ ಜಯ ಘೋಷಣೆ ಹಾಕುತ್ತಾ, ದೇಶ ಭಕ್ತಿ ಗೀತೆಗಳನ್ನು ಹಾಡುತ್ತಾ ಸಾಗಿದರು.
ಮೆರವಣಿಗೆಯಲ್ಲಿ ಸಂಸದ ರಾಜಾ ಅಮರೇಶ್ವರ ನಾಯಕ, ಬಿಜೆಪಿಯ ಮುಖಂಡ ಎನ್ ಶಂಕ್ರಪ್ಪ, ಜಿಲ್ಲಾಧ್ಯಕ್ಷ ರಮಾನಂದ ಯಾದವ್, ನಗಭಿವೃದ್ದಿ ಪ್ರಾಧಿಕಾರ ಅಧ್ಯಕ್ಷ ತಿಮ್ಮಪ್ಪ ನಾಡಗೌಡ, ಕಿಲ್ಲೇ ಬೃಹನ್ಮಠದ ಶಾಂತಮಲ್ಲ ಶಿವಾಚಾರ್ಯ ಮಹಾಸ್ವಾಮಿ, ರವೀಂದ್ರ ಜಲ್ದಾರ್, ರಾಜಕುಮಾರ, ನಗರಸಭೆ ಸದಸ್ಯ ಎನ್.ಕೆ.ನಾಗರಾಜ, ಈ.ಶಶಿರಾಜ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.