ADVERTISEMENT

ಟಿಪ್ಪರ್‌ ಡಿಕ್ಕಿ: ಪಾದಚಾರಿ ಸಾವು

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2021, 5:11 IST
Last Updated 14 ಸೆಪ್ಟೆಂಬರ್ 2021, 5:11 IST

ರಾಯಚೂರು: ನಗರದ ಡಾ.ಬಿ.ಆರ್.ಅಂಬೇಡ್ಕರ್‌ ವೃತ್ತದ ಬಳಿ ಟಿಪ್ಪರ್‌ ಡಿಕ್ಕಿಯಾಗಿ ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.

ಹೈದರಾಬಾದ್‌ನ ಶಾದ್‌ನಗರ ನಿವಾಸಿ ರಮೇಶ (43) ಮೃತ ವ್ಯಕ್ತಿ. ಬಣ್ಣ ಬಳಿಯುವ ಕೆಲಸ ಮಾಡುತ್ತಿದ್ದ ರಮೇಶ, ರಸ್ತೆ ವಿಭಜಕ ದಾಟುವಾಗ ಟಿಪ್ಪರ್‌ ಚಕ್ರದ ಅಡಿಗೆ ಸಿಲುಕಿದ್ದಾರೆ. ತಲೆ ಸಂಪೂರ್ಣ ನಜ್ಜುಗುಜ್ಜಾಗಿತ್ತು. ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT