ಪ್ರಜಾವಾಣಿ ವಾರ್ತೆ
ರಾಯಚೂರು: ಭಯೋತ್ಪಾದಕರು ವಿರುದ್ಧ ನಡೆದ ಆಪರೇಷನ್ ಸಿಂಧೂರ್‌ನಲ್ಲಿ ಪ್ರಾಣದ ಹಂಗು ತೊರೆದು ಹೋರಾಟ ನಡೆಸಿದ ಯೋಧರಿಗೆ ಆತ್ಮಸ್ತೈರ್ಯ ತುಂಬುವ ನಿಟ್ಟಿನಲ್ಲಿ ರಾಯಚೂರಿನಲ್ಲಿ ರಾಷ್ಟ್ರ ರಕ್ಷಣಾ ಸಮಿತಿಯಿಂದ ಮೇ.17 ರಂದು ಬೆಳಿಗ್ಗೆ 9 ಗಂಟೆಗೆ ತಿರಂಗಾ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ರಾಷ್ಟ್ರ ರಕ್ಷಣಾ ಸಮಿತಿಯ ಸಂಚಾಲಕ ಶಿವಬಸಪ್ಪ ಪಾಟೀಲ ತಿಳಿಸಿದರು.
ನಗರದ ಅಂಬೇಡ್ಕರ್ ವೃತ್ತದಿಂದ ಆರಂಭಗೊಂಡು ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಸಿಟಿ ಟ್ಯಾಕಿಸ್ನ್ನು ತಿರಂಗಾ ಯಾತ್ರೆ ತಲುಪಲಿದೆ ಎಂದು ಗುರುವಾರ ಮಾಧ್ಯಮಗೊಷ್ಠಿಯಲ್ಲಿ ಹೇಳಿದರು.
ದೇಶದ ಅಖಂಡತೆ ಮತ್ತು ಭದ್ರತೆಗೆ ಧಕ್ಕೆ ಉಂಟಾದಾಗ ನಮ್ಮ ದೇಶ ಕಾಪಾಡುವ ಹೊಣೆ ಸೈನಿಕರದ್ದಾಗಿದೆ. ಅವರಿಗೆ ಗೌರವ ಸಲ್ಲಿಸಲಿಕ್ಕೆ ಯಾತ್ರೆ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯ ಮಾಜಿ ಸೈನಿಕರು, ಶಾಲಾ, ಕಾಲೇಜು ವಿದ್ಯಾರ್ಥಿಗಳು, ಯುವಕರು, ಚಿಂತಕರು, ಶಿಕ್ಷಕರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಎಲ್ಲಾ ನಾಗರಿಕರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
ಕೆ.ಎಸ್.ರಾವ್, ಮಲ್ಲೇಶ ಕುಲಕರ್ಣಿ, ನಾಗೇಶ, ಆನಂದ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.