ADVERTISEMENT

ರಾಯಚೂರಿನಲ್ಲಿ ಗರಿಷ್ಠ ತಾಪಮಾನ: 42.7 ಡಿಗ್ರಿ ಸೆಲ್ಸಿಯಸ್‌ ದಾಖಲು

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2025, 20:06 IST
Last Updated 19 ಮಾರ್ಚ್ 2025, 20:06 IST
ತಾಪಮಾನ
ತಾಪಮಾನ   

ರಾಯಚೂರು: ಜಿಲ್ಲೆಯಲ್ಲಿ ರಣ ಬಿಸಿಲು ರೆಕ್ಕೆ ಬಿಚ್ಚಿಕೊಂಡಿದ್ದು, ಬಿಸಿಲಿನ ಧಗೆ ಹೆಚ್ಚಾಗಿದೆ. ಬುಧವಾರ ಗರಿಷ್ಠ 42.7 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿದೆ.

ಬಿಸಿಲಿನ ಝಳಕ್ಕೆ ಜನ ಮಧ್ಯಾಹ್ನದ ವೇಳೆ ಮನೆಗಳಿಂದ ಹೊರಗೆ ಬರಲು ಹಿಂಜರಿಯುತ್ತಿದ್ದಾರೆ. ಮಾರುಕಟ್ಟೆ ಪ್ರದೇಶ ಜನರಿಲ್ಲದೇ ಬಿಕೋ ಎನ್ನುತ್ತಿದೆ. ಬೆಳಗಿನ ವಾಯುವಿಹಾರ ಹಾಗೂ ಸಂಜೆ ಮಾತ್ರ ಮಾರುಕಟ್ಟೆ ಪ್ರದೇಶದಲ್ಲಿ ಜನ ಕಾಣಿಸಿಕೊಳ್ಳುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT