ADVERTISEMENT

ಪ್ರವಾಸಿ ತಾಣಗಳ ಅಭಿವೃದ್ಧಿಗೆ ಯತ್ನ: ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್

ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2020, 15:51 IST
Last Updated 29 ಸೆಪ್ಟೆಂಬರ್ 2020, 15:51 IST
ರಾಯಚೂರಿನಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ ನಿಮಿತ್ತ ಮುನ್ನಾದಿನ ಮಂಗಳವಾರ ಪ್ರವಾಸೋದ್ಯಮ ಹಾಗೂ ಗ್ರಾಮೀಣ ಅಭಿವೃದ್ಧಿ ಮತ್ತು ಸ್ವಚ್ಚತಾ ಪಕ್ವಾಡ-2020 ಘೋಷ ವಾಖ್ಯದಡಿ ಸೈಕಲ್ ಜಾಥಾ ನಡೆಯಿತು. ಜಿಲ್ಲಾಧಿಕಾರಿ ಆರ್‌.ವೆಂಕಟೇಶಕುಮಾರ್‌ ಜಾಥಾಗೆ ಚಾಲನೆ ನೀಡಿದರು
ರಾಯಚೂರಿನಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ ನಿಮಿತ್ತ ಮುನ್ನಾದಿನ ಮಂಗಳವಾರ ಪ್ರವಾಸೋದ್ಯಮ ಹಾಗೂ ಗ್ರಾಮೀಣ ಅಭಿವೃದ್ಧಿ ಮತ್ತು ಸ್ವಚ್ಚತಾ ಪಕ್ವಾಡ-2020 ಘೋಷ ವಾಖ್ಯದಡಿ ಸೈಕಲ್ ಜಾಥಾ ನಡೆಯಿತು. ಜಿಲ್ಲಾಧಿಕಾರಿ ಆರ್‌.ವೆಂಕಟೇಶಕುಮಾರ್‌ ಜಾಥಾಗೆ ಚಾಲನೆ ನೀಡಿದರು   

ರಾಯಚೂರು: ಐತಿಹಾಸಿಕವಾಗಿ ಮಹತ್ವದ ಸ್ಥಾನ ಪಡೆದಿರುವ ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ದಿ ಪಡಿಸಿ, ಪ್ರವಾಸಿಗರನ್ನು ಸೆಳೆಯುವ ಯತ್ನ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರವಾಸೋಧ್ಯಮ ಇಲಾಖೆ ವತಿಯಿಂದ ವಿಶ್ವ ಪ್ರವಾಸೋಧ್ಯಮ ದಿನಾಚರಣೆ ನಿಮಿತ್ತ ಮಂಗಳವಾರ ಆಯೋಜಿಸಿದ್ದ ಸೈಕಲ್ ಜಾಥಾ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಹಸಿರು ನಿಶಾನೆ ತೋರಿಸಿ ಅವರು ಮಾತನಾಡಿದರು.

ರಾಯಚೂರು ಕೋಟೆ ಸುತ್ತಮುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆ ಮಾಡಲಾಗುತ್ತದೆ ಎಂದರು.

ADVERTISEMENT

ಪ್ರವಾಸೋಧ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಸತೀಶ ಅವರು ಪ್ರಾಸ್ತಾವಿಕ ಮಾತನಾಡಿ, ನಗರದಲ್ಲಿರುವ
ಕೋಟೆ, ಮಾನವಿ ಕಲ್ಲೂರು, ಮುದಗಲ್, ಮಸ್ಕಿ, ಮಲಿಯಾಬಾದ್ ಸೇರಿ 10 ಪ್ರಮುಖ ಪ್ರವಾಸೋದ್ಯಮ ತಾಣಗಳನ್ನು ಸರ್ಕಾರ
ಗುರುತಿಸಿದೆ. ಪ್ರವಾಸೋಧ್ಯಮ ಅಭಿವೃದ್ಧಿಗೆ ಪ್ರತಿವರ್ಷ ಅನುದಾನ ಬಿಡುಗಡೆ ಮಾಡಿ ಯಾತ್ರಿ ನಿವಾಸ ಅಭಿವೃದ್ದಿ ಪಡಿಸಲಾಗುತ್ತಿದೆ ಎಂದು ತಿಳಿಸಿದರು.

ಸೈಕಲ್ ಜಾಥಾ: ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಪ್ರವಾಸೋದ್ಯಮ ಹಾಗೂ ಗ್ರಾಮೀಣ ಅಭಿವೃದ್ಧಿ ಮತ್ತು ಸ್ವಚ್ಚತಾ ಪಕ್ವಾಡ-2020 ಘೋಷ ವಾಖ್ಯದಡಿ ಸೈಕಲ್ ಜಾಥಾ ನಡೆಯಿತು.

ಸೈಕಲ್ ಜಾಥಾವು ನಗರದ ಜಿಲ್ಲಾಧಿಕಾರಿ ಕಚೇರಿಯಿಂದ ಪ್ರಾರಂಭವಾಗಿ ಶ್ರೀ ಬಸವೇಶ್ವರ ವೃತ್ತ, ಡಾ.ಬಿ.ಆರ್.ಅಂಬೇಡ್ಕರ್
ವೃತ್ತದ ಮೂಲಕ ಕೇಂದ್ರ ಬಸ್ ನಿಲ್ದಾಣದ ಬಳಿಯಿರುವ ಕೋಟೆಗೆ ತಲುಪಿತು. ಕೋಟೆಯಲ್ಲಿ ಸ್ವಚ್ಚತಾ ಅಭಿಯಾನ
ಮಾಡಲಾಯಿತು.

ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಸಂಚಾಲಕ ದಂಡಪ್ಪ ಬಿರಾದಾರ್ ಅವರು ಪರಿಸರ ಪ್ರತಿಜ್ಞೆ ವಿಧಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಕ ಅಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ಹೆಚ್ಚುವರಿ ಜಿಲ್ಲಾಧಿಕಾರಿ ದುರಗೇಶ, ಜಿಲ್ಲಾ
ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಮಕೃಷ್ಣ, ಡಿಯುಡಿಸಿ ಪಿಡಿ ಮಹೇಂದ್ರಕುಮಾರ್, ನಗರಸಭೆ ಪೌರಾಯುಕ್ತ
ದೊಡ್ಡಮನಿ, ಡಾ.ವಿಜಯ ಶಂಕರ, ಮುಖಂಡರಾದ ತ್ರಿವಿಕ್ರಮ ಜೋಷಿ, ಶ್ರೀನಿವಾಸ ರಾಯಚೂರಕರ್, ರಾಜೇಂದ್ರ ಜಲ್ದಾರ್,
ರಾಜೇಂದ್ರ ಶಿವಾಳೆ ಹಾಗೂ ರೆಡ್ ಕ್ರಾಸ್ ಸಂಸ್ಥೆ, ಗ್ರೀನ್ ರಾಯಚೂರು ಹಾಗೂ ವಿವಿಧ ಸಂಘಟನೆಗಳ ಮುಖಂಡರು
ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.