ADVERTISEMENT

ರಾಯಚೂರು | ಬೈಕ್‌ಗೆ ಟ್ರ್ಯಾಕ್ಟರ್ ಡಿಕ್ಕಿ: ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2024, 14:37 IST
Last Updated 16 ಆಗಸ್ಟ್ 2024, 14:37 IST

ರಾಯಚೂರು: ತಾಲ್ಲೂಕಿನ ಎಲೆಬಿಚ್ಚಾಲಿ ಗ್ರಾಮದಲ್ಲಿ ಬೈಕ್‌ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ್ದಾನೆ.

ಟ್ರ್ಯಾಕ್ಟರ್‌ನಲ್ಲಿ ಕಬ್ಬಿಣದ ವಸ್ತು ಹಾಗೂ ಟಿನ್ ಶೀಟ್ ಹಾಕಿಕೊಂಡು ಹೋಗುತ್ತಿದ್ದಾಗ ಬೈಕ್‌ಗೆ ಹಿಂಬದಿಯಿಂದ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದೆ. ಪರಿಣಾಮ ದ್ವಿಚಕ್ರ ವಾಹನ ಸವಾರ ಬಿ.ಹನುಮಾಪುರ ಗ್ರಾಮದ ಚಂದ್ರಶೇಖರ (21) ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಘಟನೆ ಬಳಿಕ ಟ್ರ್ಯಾಕ್ಟರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಯರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.