ADVERTISEMENT

ರಾಯಚೂರು| ಟ್ರ್ಯಾಕ್ಟರ್‌ಗಳಿಗೆ ಬೆಂಕಿ; ಮಾಲೀಕರ ಸಂಚು ಕಾರಣ: ಚಾಮರಸ ಮಾಲೀಪಾಟೀಲ

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2025, 6:57 IST
Last Updated 15 ನವೆಂಬರ್ 2025, 6:57 IST
ಚಾಮರಸ ಮಾಲೀಪಾಟೀಲ
ಚಾಮರಸ ಮಾಲೀಪಾಟೀಲ   

ರಾಯಚೂರು: ‘ಮುಧೋಳ ತಾಲ್ಲೂಕಿನ ಸಕ್ಕರೆ ಕಾರ್ಖಾನೆ ಬಳಿ 60ಕ್ಕೂ ಅಧಿಕ ಕಬ್ಬು ತುಂಬಿದ ಟ್ರ್ಯಾಕ್ಟರ್‌ಗಳಿಗೆ ಬೆಂಕಿ ಹಚ್ಚಿರುವುದಕ್ಕೆ ಸರ್ಕಾರದ ಗೊಂದಲ ಹಾಗೂ ಕಾರ್ಖಾನೆ ಮಾಲೀಕರ ಸಂಚು ಕಾರಣ‘ ಎಂದು ಕರ್ನಾಟಕ ರಾಜ್ಯ ರೈತಸಂಘದ ರಾಜ್ಯ ಗೌರವಾಧ್ಯಕ್ಷ ಚಾಮರಸ ಮಾಲೀಪಾಟೀಲ ಆರೋಪಿಸಿದರು.

‘ಕಬ್ಬು ಬೆಳೆಗಾರರು ಶಾಂತರೀತಿಯಲ್ಲಿ ಹೋರಾಟ ಮಾಡುತ್ತಿದ್ದರೂ ಪ್ರತಿಭಟನೆ ವೇಳೆ ಟ್ರ್ಯಾಕ್ಟರ್‌ಳಿಗೆ ಬೆಂಕಿ ಹಚ್ಚಲಾಗಿದೆ. ಈ ಕೃತ್ಯ ಯಾರೇ ಮಾಡಿದ್ದರೂ ರೈತ ಸಂಘ ಅದನ್ನು ಖಂಡಿಸುತ್ತದೆ’ ಎಂದು ನಗರದಲ್ಲಿ ಶುಕ್ರವಾರ ಮಾಧ್ಯಮ ಗೋಷ್ಠಿಯಲ್ಲಿ ಹೇಳಿದರು.

‘ಕಾರ್ಖಾನೆಯಲ್ಲಿ ಗೂಂಡಾಗಳನ್ನು ಇರಿಸಿಕೊಂಡು ಸಂಚು ರೂಪಿಸಲಾಗಿದೆ. ಸರ್ಕಾರ ಉನ್ನತ ಮಟ್ಟದ ತನಿಖೆ ನಡೆಸಬೇಕು. ಘಟನೆಗೆ ಕಾರಣರಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ನಷ್ಟ ಉಂಟಾದ ರೈತರಿಗೆ ಪರಿಹಾರ ನೀಡಬೇಕು‘ ಎಂದು ಒತ್ತಾಯಿಸಿದರು.


ಹತ್ತಿಗೆ ಬೆಂಬಲ ಬೆಲೆ ಕೊಡಿ:

ADVERTISEMENT

ರಾಯಚೂರು ಜಿಲ್ಲೆಯಲ್ಲಿ 5.50 ಎಕರೆ ಪ್ರದೇಶದಲ್ಲಿ ಹತ್ತಿ ಬೆಳೆಯಲಾಗಿದೆ. ಸರ್ಕಾರ, ₹ 2110 ಬೆಂಬಲ ಬೆಲೆ ಯೋಜನೆಯಲ್ಲಿ ಹತ್ತಿ ಖರೀದಿ ಮಾಡುತ್ತಿದೆ. ಆದರೆ ಮುಕ್ತ ಮಾರುಕಟ್ಟೆಯಲ್ಲಿ ಕ್ವಿಂಟಲ್‌ಗೆ ₹3300 ಕ್ವಿಂಟಾಲ್ ಗೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಖರೀದಿ ಕೇಂದ್ರದಲ್ಲಿ ರೈತರಿಗೆ ಸ್ಟ್ರಾಟ್ ಮಾಡಿಕೊಳ್ಳಲು 30 ಸೆಕೆಂಡ್ ಕಾಲಾವಕಾಶ ನೀಡಲಾಗಿದ್ದು, ಇಷ್ಟು ಕಡಿಮೆ ಸಮಯದಲ್ಲಿ ರೈತರು ಆಯ್ಕೆ ಮಾಡಿಕೊಳ್ಳಲು ಆಗುವುದಿಲ್ಲ, ಮುಕ್ತ ಮಾರುಕಟ್ಟೆಯಲ್ಲಿ ತೂಕದಲ್ಲಿ ವ್ಯತ್ಯಾಸವಾಗುತ್ತದೆ. ಮತ್ತು ಅನ್‌ ಲೋಡ್ ಸಮಯದಲ್ಲಿ ಬೆಲೆಯನ್ನು ಕಡಿಮೆ ಮಾಡಲಾಗುತ್ತದೆ. ಖರೀದಿ ಕೇಂದ್ರ ಮತ್ತು ಮುಕ್ತ ಮಾರುಕಟ್ಟೆಯ ಈ ನಡೆಯಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ ಎಂದರು.

ರೈತ ಸಂಘ, ಸಿಸಿಐ ಅಧಿಕಾರಿಗಳನ್ನು ಕರೆದು ಸಭೆ ನಡೆಸಿ, ನ.21ರೊಳಗಾಗಿ ಹತ್ತಿ ಖರೀದಿ, ಬೆಳೆಹಾನಿ ಪರಿಹಾರ ಸೇರಿದಂತೆ ರೈತರ ಇತರೆ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ನ.21ಕ್ಕೆ ಜಿಲ್ಲೆಯ ಸಮಗ್ರ ಹತ್ತ ಬೆಳೆಗಾರರೊಂದಿಗೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನಿಡಿದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪ್ರಭಾಕರ ಪಾಟೀಲ ಇಂಗಳದಾಳ, ಬೂದಯ್ಯ ಸ್ವಾಮಿ, ದೇವರಾಜ ನಾಯಕ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.