ಮಸ್ಕಿ: ಪಟ್ಟಣದ ಅಶೋಕ ವೃತ್ತದ ಮುದಗಲ್ ರಸ್ತೆಯಲ್ಲಿ ಬೈಕ್ ಸೇರಿದಂತೆ ವಾಹನಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡುತ್ತಿದ್ದರಿಂದ ಸಾರ್ವಜನಿಕರು ಪರದಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ.
‘ಮುದಗಲ್, ಬಾಗಲಕೋಟೆ ಸೇರಿದಂತೆ ವಿವಿಧ ಊರುಗಳಿಗೆ ತೆರಳಬೇಕಾದ ಸಾರಿಗೆ ಬಸ್‌ಗಳಿಗೆ ನಿಲುಗಡೆಗೆ ಸ್ಥಳ ಕೂಡ ಇಲ್ಲದಂತಹ ವಾತಾವರಣ ನಿರ್ಮಾಣವಾಗಿದೆ. ಬಸ್‌ಗಳ ಚಾಲಕರು ನಡು ರಸ್ತೆಯಲ್ಲಿಯೇ ಬಸ್ ನಿಲ್ಲಿಸಿ, ಪ್ರಯಾಣಿಕರನ್ನು ಹತ್ತಿಸಿಕೊಳ್ಳುತ್ತಿದ್ದರಿಂದ ಟ್ರಾಫಿಕ್ ಜಾಮ್ ಆಗಿ ತೊಂದರೆ ಅನುಭವಿಸುವಂತಾಗಿದೆ’ ಎಂದು ಸಾರ್ವಜನಿಕರು ದೂರಿದ್ದಾರೆ.
‘ರಸ್ತೆಯಲ್ಲಿನ ವ್ಯಾಪಾರ ಮಳಿಗೆಗಳ ಮುಂದೆ ಬೈಕ್, ಟಾಟ್ ಏಸ್ ಸೇರಿದಂತೆ ಇತರೆ ವಾಹನಗಳನ್ನು ನಿಲ್ಲಿಸಿ, ಖರೀದಿಗೆ ತೆರಳುತ್ತಾರೆ. ಇದರಿಂದಾಗಿ ರಸ್ತೆ ಸಂಚಾರಕ್ಕೆ ಸಂಕಷ್ಟ ಬಂದಿದೆ. ಪುರಸಭೆ, ಪೊಲೀಸ್ ಇಲಾಖೆ ಮುದಗಲ್ ರಸ್ತೆಯಲ್ಲಿ ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಮುಂದಾಗಬೇಕು’ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.