ರಾಯಚೂರು: ಇಲ್ಲಿನ ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆವರಣದಲ್ಲಿ ಟ್ರಾಮಾ ಕೇರ್ ಸೆಂಟರ್‌ಗೆ ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಶುಕ್ರವಾರ ಚಾಲನೆ ನೀಡಿದರು.
ಟ್ರಾಮಾ ಕೇರ್ ಸೆಂಟರ್ ಕಾರ್ಯ ಯೋಜನೆಯ ಬಗ್ಗೆ ಟ್ರಾಮಾ ಕೇರ್ ಸೆಂಟರ್ ವಿಶೇಷಾಧಿಕಾರಿ ಡಾ.ಬಾಲಾಜಿ ಪೈ, ಜಿಲ್ಲಾಧಿಕಾರಿ ನಿತೀಶ್ ಕೆ., ಜಿಲ್ಲಾ ಪಂಚಾಯಿಸಿ ಸಿಇಒ ಅಧಿಕಾರಿ ಈಶ್ವರಕುಮಾರ ಕಾಂದೂ, ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕ ಡಾ.ರಮೇಶ ಬಿ. ಎಚ್., ಆಸ್ಪತ್ರೆಯ ವಿಶೇಷಾಧಿಕಾರಿ ಡಾ.ರಮೇಶ ಸಾಗರ, ರಿಮ್ಸ್ ಮುಖ್ಯ ಆಡಳಿತಾಧಿಕಾರಿ ಗುರುಸಿದ್ದಯ್ಯ ಹಿರೇಮಠ, ಆರ್ಥಿಕ ಅಧಿಕಾರಿ ಹನುಮೇಶ ಅವರೊಂದಿಗೆ ಕೆಲಹೊತ್ತು ಚರ್ಚಿಸಿದರು.
ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್, ರಾಯಚೂರು ನಗರ ಕ್ಷೇತ್ರದ ಶಾಸಕ ಡಾ.ಶಿವರಾಜ ಪಾಟೀಲ, ಸಂಸದ ಜಿ.ಕುಮಾರ ನಾಯಕ, ವಿಧಾನ ಪರಿಷತ್ ಸದಸ್ಯ ಎ.ವಸಂತಕುಮಾರ, ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕ ಡಾ.ಬಿ.ಎಲ್.ಸುಜಾತಾ ರಾಥೋಡ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ ಎಂ, ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮೊಹಾಪಾತ್ರಾ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.