
ಸಿಂಧನೂರು: ದಾವಣಗೆರೆಯ ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರು ನಿಧನರಾದ ಹಿನ್ನೆಲೆಯಲ್ಲಿ ಸೋಮವಾರ ನಗರದ ಪ್ರವಾಸಿ ಮಂದಿರದಲ್ಲಿರುವ ಶಾಸಕ ಹಂಪನಗೌಡ ಬಾದರ್ಲಿ ಅವರ ಕಚೇರಿಯಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕದಿಂದ ಪೂಜೆ ಮತ್ತು ಪುಷ್ಪನಮನದೊಂದಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಆರ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಪಂಪನಗೌಡ ಬಾದರ್ಲಿ, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ಎಂ.ಲಿಂಗಪ್ಪ ದಢೇಸುಗೂರು, ನಗರ ಘಟಕದ ಅಧ್ಯಕ್ಷ ಖಾಜಿಮಲಿಕ್ ವಕೀಲ, ಮುಖಂಡರಾದ ಎನ್.ಅಮರೇಶ, ಅಮರಯ್ಯಸ್ವಾಮಿ ಅಲಬನೂರು, ಮಲ್ಲನಗೌಡ ಮಾವಿನಮಡು, ಅನಿಲಕುಮಾರ ವೈ, ರಾಮನಗೌಡ ಮಲ್ಕಾಪುರ, ಶಫಿವುಲ್ಲ ಖಾನ್, ಛತ್ರಪ್ಪ ಕುರುಕುಂದಿ, ಎಚ್.ಬಾಷಾ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.