ಮಾನ್ವಿ (ರಾಯಚೂರು): ಮಂಗಳವಾರ ಹೊಸಪೇಟೆಯ ತುಂಗಭದ್ರಾ ಜಲಾಶಯದಿಂದ 1.40ಲಕ್ಷ ಕ್ಯೂಸೆಕ್ ನೀರು ತುಂಗಭದ್ರಾ ನದಿಗೆ ಹರಿಬಿಟ್ಟಿರುವ ಹಿನ್ನೆಲೆಯಲ್ಲಿ ತಾಲ್ಲೂಕಿನ ತುಂಗಭದ್ರಾ ನದಿಪಾತ್ರದ ಗ್ರಾಮಗಳ ಗ್ರಾಮಸ್ಥರಿಗೆ ಪ್ರವಾಹ ಭೀತಿ ಉಂಟಾಗಿದೆ.
ಜಲಾಶಯದ ಹೊರಹರಿವಿನ ಪ್ರಮಾಣ ಇನ್ನೂ ಹೆಚ್ಚಾದರೆ, ಜಿಲ್ಲೆಯ ಸಿಂಧನೂರು, ಮಾನ್ವಿ ಹಾಗೂ ರಾಯಚೂರು ತಾಲ್ಲೂಕಗಳ ತುಂಗಭದ್ರಾ ನದಿಪಾತ್ರದ ಗ್ರಾಮಗಳಲ್ಲಿ ಪ್ರವಾಹ ಉಂಟಾಗುವ ಸಂಭವ ಇದೆ. ಸಂಭವನೀಯ ಪ್ರವಾಹ ಪರಿಸ್ಥಿತಿ ಬಗ್ಗೆ ಮಾನ್ವಿ ತಾಲ್ಲೂಕು ಆಡಳಿತ ಮುಂಜಾಗ್ರತಾ ಕ್ರಮ ಕೈಗೊಂಡಿದ್ದು, ನದಿಪಾತ್ರದ ಗ್ರಾಮಸ್ಥರಿಗೆ ಎಚ್ಚರಿಕೆ ವಹಿಸಲು ಮುನ್ಸೂಚನೆ ನೀಡಿದೆ.
ರಾಜಲಬಂಡಾ ಅಣೆಕಟ್ಟು ಸಂಪೂರ್ಣ ಭರ್ತಿ ಗ್ರಾ.ಪಂ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ರಚನೆ ನದಿಪಾತ್ರದ ಗ್ರಾಮಗಳಲ್ಲಿ ಜನಜಾಗೃತಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.