
ಪ್ರಜಾವಾಣಿ ವಾರ್ತೆ
ಪ್ರಜಾವಾಣಿ ವಾರ್ತೆ
ರಾಯಚೂರು: ಕಾರ್ತಿಕ ಶುದ್ಧ ಪೌರ್ಣಮಿಯ ಪ್ರಯುಕ್ತ ಮಂತ್ರಾಲಯದ ತುಂಗಾಭದ್ರಾ ನದಿ ತಟದಲ್ಲಿ ಬುಧವಾರ ರಾತ್ರಿ ತುಂಗಾರತಿ ವಿಜೃಂಭಣೆಯಿಂದ ನಡೆಯಿತು.
ಮಂತ್ರಾಲಯದ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ತುಂಗಾರತಿ ಬೆಳಗಿದರು. ನಂತರ ಪ್ರಹ್ಲಾದರಾಜರ ಉತ್ಸವಕ್ಕೆ ಚಾಲನೆ ನೀಡಿದರು. ಇದಕ್ಕೂ ಮೊದಲು ಭಕ್ತಿ ಸಂಗೀತ ಕಾರ್ಯಕ್ರಮಗಳು ನಡೆದವು.
ತುಂಗಾರತಿ ಪೂರ್ಣಗೊಂಡ ನಂತರ ಮಠದ ಪ್ರಾಕಾರದಲ್ಲಿ ಲಕ್ಷದೀಪೋತ್ಸವ ನಡೆಯಿತು. ನೂರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.