
ಆರೋಪಿಗಳು
ರಾಯಚೂರು: ರಾಯಚೂರಿನ ಮಾವಿನಕೆರೆ ದಂಡೆಯ ಮೇಲೆ ಶುಕ್ರವಾರ ರಾತ್ರಿ ಜನ್ಮದಿನದ ಪಾರ್ಟಿಗೆ ಕರೆಸಿ ಕ್ಷುಲ್ಲಕ ಕಾರಣಕ್ಕಾಗಿ ಜಗಳವಾಡಿ ಯುವಕನ ಕೊಲೆ ಮಾಡಲಾಗಿದೆ.
ಜಹೀರಾಬಾದ್ ಬಡಾವಣೆ ನಿವಾಸಿ ವಿಶಾಲ (22) ಕೊಲೆಯಾಗಿದ್ದಾನೆ. ಬಸವರಾಜ, ಜನ್ಮದಿನದ ಪಾರ್ಟಿ ಕೊಡಿಸುವುದಾಗಿ ನಂಬಿಸಿ ವಿಶಾಲನನ್ನು ಕರೆಸಿಕೊಂಡಿದ್ದ. ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.
ಆರೋಪಿಗಳಾದ ಜಹೀರಾಬಾದ್ ಬಡಾವಣೆಯ ರಾಜು ಅಲಿಯಾಸ್ ಯೇಸು (19) ಹಾಗೂ ಬಸವರಾಜ (19) ಎನ್ನುವರನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಮಾಡಿ ಓಡಿ ಹೋಗುತ್ತಿದ್ದಾಗ ಡಿವೈಎಸ್‌ಪಿ ಶಾಂತವೀರ ಕೈಗೆ ಸಿಕ್ಕಿ ಬಿದ್ದಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಸದರ್ ಬಜಾರ್ ಪೊಲೀಸ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕೊಲೆಯಾಗಿರುವ ವಿಶಾಲ್
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.