
ಪ್ರಜಾವಾಣಿ ವಾರ್ತೆ
ಕವಿತಾಳ: ಪಟ್ಟಣದ ಸಮೀಪ ಸೋಮವಾರ ಸಂಜೆ ನಡೆದ ಎರಡು ಪ್ರತ್ಯೇಕ ಅಪಘಾತ ಪ್ರಕರಣದಲ್ಲಿ ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದಾರೆ.
ಪಟ್ಟಣದ ನಿವಾಸಿ ಶಿವಕುಮಾರ (30) ಮಸ್ಕಿ ಕ್ರಾಸ್‌ನಲ್ಲಿ ಬೈಕ್‌ಗೆ ಆಟೊ ಡಿಕ್ಕಿ ಹೊಡೆದು ಗಾಯಗೊಂಡಿದ್ದರು. ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಬೈಕ್ ಸವಾರ, ದೇವತಗಲ್ ಗ್ರಾಮದ ಯಮನೂರಪ್ಪ (18) ಪರಸಾಪುರ ಹತ್ತಿರ ಬೈಕ್ ಮತ್ತು ಟ್ರ್ಯಾಕ್ಟರ್ ನಡುವೆ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ.
ಈ ಕುರಿತು ಕವಿತಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.