
ಮಸ್ಕಿ (ರಾಯಚೂರು ಜಿಲ್ಲೆ): ವಿಧಾನಸಭಾ ಚುನಾವಣೆ ವೇಳೆ ಪ್ರಚೋದಕಾರಿ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯ ನಟಿ, ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ ಅವರಿಗೆ ಗುರುವಾರ ಷರತ್ತುಬದ್ಧ ಜಾಮೀನು ಮುಂಜೂರು ಮಾಡಿದೆ.
ಉಮಾಶ್ರೀ ಪರವಾಗಿ ವಕೀಲ ನಬೀ ಶೇಡಮಿ ರಸೂಲ್, ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಆರ್. ಹನುಮೇಶ ನಾಯಕ ವಾದ ಮಂಡಿಸಿದರು. ವಾದ–ಪ್ರತಿವಾದ ಆಲಿಸಿದ ನ್ಯಾಯಾಧೀಶರಾದ ರೂಪಾಶ್ರೀ ವಗ್ಗಾ ಅವರು ₹50 ಸಾವಿರ ಬಾಂಡ್ ಹಾಗೂ ಒಬ್ಬ ಜಾಮೀನುದಾರನ ಶ್ಯೂರಿಟಿ ನೀಡಬೇಕು ಎಂಬ ಷರತ್ತು ವಿಧಿಸಿ ಜಾಮೀನು ನೀಡಿ ಆದೇಶಿಸಿದ್ದಾರೆ. ರವಿಕುಮಾರ ಮಡಿವಾಳ ಎಂಬುವರು ಜಾಮೀನು ನೀಡಿದರು.
2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್. ಬಸನಗೌಡ ತುರ್ವಿಹಾಳ ಅವರ ಪರವಾಗಿ ನಡೆದ ಪ್ರಚಾರ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದರು ಎಂದು ಚುನಾವಣಾಧಿಕಾರಿ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.