ADVERTISEMENT

ಅನಗತ್ಯ ಆರೋಪ ಖಂಡನೀಯ

​ಪ್ರಜಾವಾಣಿ ವಾರ್ತೆ
Published 10 ಜೂನ್ 2020, 8:56 IST
Last Updated 10 ಜೂನ್ 2020, 8:56 IST
ಲಿಂಗಸುಗೂರಲ್ಲಿ ಪಂಚಾಯತ್‌ ರಾಜ್‌ ಇಲಾಖೆ ಮೇಲೆ ಅನಗತ್ಯ ಆರೋಪ ಮಾಡುತ್ತಿರುವುದು ಖಂಡಿಸಿ ಮಂಗಳವಾರ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ನೌಕರರು ಮನವಿ ಸಲ್ಲಿಸಿದರು
ಲಿಂಗಸುಗೂರಲ್ಲಿ ಪಂಚಾಯತ್‌ ರಾಜ್‌ ಇಲಾಖೆ ಮೇಲೆ ಅನಗತ್ಯ ಆರೋಪ ಮಾಡುತ್ತಿರುವುದು ಖಂಡಿಸಿ ಮಂಗಳವಾರ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ನೌಕರರು ಮನವಿ ಸಲ್ಲಿಸಿದರು   

ಲಿಂಗಸುಗೂರು: ಕೊರೋನಾ ವೈರಸ್‌ ಹರಡದಂತೆ ಜಿಲ್ಲಾ ಮತ್ತು ತಾಲ್ಲೂಕು ಆಡಳಿತ ವಹಿಸಿದ ಎಲ್ಲಾ ಜವಾಬ್ದಾರಿಗಳನ್ನು ಸರಿಯಾಗಿ ನಿರ್ವಹಿಸಿದ್ದೇವೆ. ಅನಗತ್ಯ ಆರೋಪ ಮಾಡುತ್ತಿರುವುದು ಸರಿಯಲ್ಲ ಎಂದು ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ನೌಕರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ಉಪ ವಿಭಾಗಾಧಿಕಾರಿ ರಾಜಶೇಖರ ಡಂಬಳ ಅವರಿಗೆ ಮನವಿ ಸಲ್ಲಿಸಿದ ಅವರು, ತಾವುಗಳು ಗ್ರಾಮೀಣ ಮಟ್ಟದಲ್ಲಿ ಜನಜಾಗೃತಿ, ರಾಸಾಯನಿಕ ದ್ರಾವಣ ಸಿಂಪಡಣೆ, ಕ್ವಾರಂಟೈನ್‌ ಕೇಂದ್ರಗಳ ನಿರ್ವಹಣೆ ಸೇರಿದಂತೆ ಅಧಿಕಾರಿಗಳ ನಿರ್ದೇಶನಗಳ ಮೇರೆಗೆ ಕ್ರಿಯಾಶೀಲವಾಗಿ ಸಾಕಷ್ಟು ಕೆಲಸ ಕಾರ್ಯ ಮಾಡಿಕೊಂಡು ಬಂದಿದ್ದೇವೆ ಎಂದರು.

ಸಾರ್ವಜನಿಕ ಸ್ಥಳಗಳಲ್ಲಿ ಅಂತರ ಕಾಯ್ದುಕೊಳ್ಳುವುದು, ಸೆನಿಟೈಸರ್‌ ಬಳಕೆ, ಕ್ವಾರಂಟೈನ್‌ ಕೇಂದ್ರಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸುವಲ್ಲಿ ಹಗಲಿರಳು ಶ್ರಮಿಸುತ್ತ ಬಂದಿದ್ದೇವೆ. ಈ ಎಲ್ಲಾ ಕೆಲಸ ಕಾರ್ಯಗಳಿಗೆ ಸಾಕಷ್ಟು ಹಣ ಖರ್ಚು ಮಾಡಿಕೊಂಡಿದ್ದು ತಾಲ್ಲೂಕು ಆಡಳಿತ ಕೂಡಲೆ ಆ ಹಣವನ್ನು ಪಾವತಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ಅಣ್ಣಾರಾವ್‌ ನಾಯಕ, ತಿಮ್ಮಣ್ಣ ನಾಯಕ, ಶೋಭಾರಾಣಿ, ಬಸವರಾಜ, ತಿಮ್ಮನಗೌಡ, ಸೋಮನಗೌಡ, ನರಸಪ್ಪ, ಮಲ್ಲಿಕಾರ್ಜುನ, ವೆಂಕಟೇಶ ದೇಸಾಯಿ, ಶಶಿಕಲಾ, ಮಂಜುನಾಥ, ವಿಜಯಲಕ್ಷ್ಮೀ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.