ADVERTISEMENT

ಗುತ್ತಿಗೆ ಪದ್ಧತಿ ರದ್ದುಪಡಿಸಲು ಒತ್ತಾಯ

ಕರ್ನಾಟಕ ರಾಜ್ಯ ದಿನಗೂಲಿ ಮತ್ತು ಗುತ್ತಿಗೆ ಪೌರಸೇವಾ ನೌಕರರ ಸಂಘದಿಂದ ಅನಿರ್ದಿಷ್ಟಾವಧಿ ಧರಣಿ ಆರಂಭ

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2018, 15:31 IST
Last Updated 12 ಸೆಪ್ಟೆಂಬರ್ 2018, 15:31 IST
ರಾಯಚೂರಿನಲ್ಲಿ ಕರ್ನಾಟಕ ರಾಜ್ಯ ದಿನಗೂಲಿ ಮತ್ತು ಗುತ್ತಿಗೆ ಪೌರಸೇವಾ ನೌಕರರ ಸಂಘದ ಕಾರ್ಮಿಕರು ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಮಂಗಳವಾರ ಸಂಜೆಯಿಂದ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದರು
ರಾಯಚೂರಿನಲ್ಲಿ ಕರ್ನಾಟಕ ರಾಜ್ಯ ದಿನಗೂಲಿ ಮತ್ತು ಗುತ್ತಿಗೆ ಪೌರಸೇವಾ ನೌಕರರ ಸಂಘದ ಕಾರ್ಮಿಕರು ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಮಂಗಳವಾರ ಸಂಜೆಯಿಂದ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದರು   

ರಾಯಚೂರು: ನಗರ ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿಗುತ್ತಿಗೆ ಪದ್ಧತಿ ರದ್ದುಪಡಿಸಿರುವ ರಾಜ್ಯ ಸರ್ಕಾರದಆದೇಶ ಜಾರಿಗೊಳಿಸಬೇಕು ಎನ್ನುವುದುಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಿನಗೂಲಿ ಮತ್ತು ಗುತ್ತಿಗೆ ಪೌರಸೇವಾ ನೌಕರರ ಸಂಘದ ನೇತೃತ್ವದಲ್ಲಿ ಕಾರ್ಮಿಕರುಮಂಗಳವಾರದಿಂದ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದರು.

ಗುತ್ತಿಗೆ ಪೌರಕಾರ್ಮಿಕರನ್ನು ಕಾಯಂಗೊಳಿಸಿ, ನೇರವಾಗಿ ವೇತನ ಪಾವತಿ ಮಾಡಬೇಕು. 700 ಜನರಿಗೆ ಒಬ್ಬ ಪೌರಕಾರ್ಮಿಕ ಎಂಬ ಆದೇಶವನ್ನು ರದ್ದುಪಡಿಸಬೇಕು. ಈ ಹಿಂದೆ ಜಾರಿಯಲ್ಲಿದ್ದ ಘನತ್ಯಾಜ್ಯ ವಿಲೇವಾರಿ ಪದ್ಧತಿ ಮುಂದುವರಿಸಬೇಕು. ಬಾಕಿಯಿರುವ ಕಾರ್ಮಿಕರ ವೇತನ ಪಾವತಿಸಬೇಕು ಎಂದು ಆಗ್ರಹಿಸಿದರು.

2016ರ ಸೆಪ್ಟೆಂಬರ್‌ನಿಂದ ನವೆಂಬರ್‌ವರೆಗಿನ ಬಾಕಿ ವೇತನ ನೀಡಬೇಕು. ನಗರಸಭೆ ಸಂಗ್ರಹಿಸುವ ಹಣವನ್ನು ಸರ್ಕಾರದ ಆದೇಶಗಳನ್ನು ಉಲ್ಲಂಘಿಸಿ ಗುತ್ತಿಗೆ ಕಾಮಗಾರಿಗೆ ಪಾವತಿಸಲಾಗುತ್ತಿರುವ ನಗರಸಭೆಯ ವಿರುದ್ಧ ಕ್ರಮ ಜರುಗಿಸಬೇಕು. 2017ರಲ್ಲಿ ದಿನಗೂಲಿ ಕಾರ್ಮಿಕರ ಕಾಯಂಗೊಳಿಸುವ ನೆಪದಲ್ಲಿ ನಕಲಿ ಕಾರ್ಮಿಕರನ್ನು ಸೃಷ್ಟಿ ಮಾಡಿರುವುದನ್ನು ತನಿಖೆ ಮಾಡಬೇಕು ಎಂದು ಒತ್ತಾಯಿಸಿದರು.

ADVERTISEMENT

15 ವರ್ಷಗಳಿಂದ ಎಲೆಕ್ಟ್ರಿಕಲ್ ವಿಭಾಗದ ಗುತ್ತಿಗೆ ಕಾರ್ಮಿಕರಿಗೆ ಪಿಎಫ್, ಇಎಸ್‌ಐ ಪಾವತಿಸದ ಏಜೆನ್ಸಿಯ ಠೇವಣಿ ಹಾಗೂ ಬಿಲ್ ತಡೆಹಿಡಿದು ಪಿಎಫ್ ಹಾಗೂ ಇಎಸ್‌ಐಗೆ ಬಾಕಿ ಹೊಂದಿಸಬೇಕು. ನೈರ್ಮಲ್ಯ ವಿಭಾಗದ ವಾಹನ, ಟಿಪ್ಪರ್ ಚಾಲಕರನ್ನು ಪೌರಕಾರ್ಮಿಕರೆಂದು ಪರಿಗಣಿಸಬೇಕು. 2015 ರಿಂದ ಪಿಎಫ್, ಇಎಸ್‌ಐ ಹಣ ವಸೂಲಿ ಮಾಡಬೇಕು. 2016ರ ಆಗಸ್ಟ್‌ನಿಂದ ನವೆಂಬರ್‌ವರೆಗಿನ ಬಾಕಿ ವೇತನ ನೀಡಬೇಕು ಎಂದರು.

ನಗರಸಭೆ ಪ್ಯಾಕೇಜ್ ನಂಬರ್ 2, 7ರ ಪಿಎಫ್‌, ಇಎಸ್ಐ 2012ರಿಂದ 2014ರವರೆಗೆ ಪಾವತಿಯಾಗಿಲ್ಲ. ಗುತ್ತಿಗೆದಾರರ ಬಿಲ್ ತಡೆಹಿಡಿದು ಪಾವತಿಗೆ ಕ್ರಮ ಜರುಗಿಸಬೇಕು. ಕಾರ್ಮಿಕರು ಮರಣ ಹೊಂದಿದರೆ ಕುಟುಂಬದ ಸದಸ್ಯರಿಗೆ ಕೆಲಸ ನೀಡಬೇಕು. ಶವ ಸಂಸ್ಕಾರಕ್ಕೆ ₹5 ಸಾವಿರ ನೀಡಬೇಕು ಎಂದು ಮನವಿ ಮಾಡಿದರು.

ನಗರಸಭೆಯ ಎಲ್ಲ ಪ್ಯಾಕೇಜ್‌ಗಳಲ್ಲಿ ಕಡ್ಡಾಯವಾಗಿ ರಜೆಯಪುಸ್ತಕನಿರ್ವಹಿಸಿ ಸೌಲಭ್ಯ ನೀಡಬೇಕು. ನೈರ್ಮಲ್ಯ ವಿಭಾಗದಲ್ಲಿ 20 ಜನರು ಕೆಲಸ ಮಾಡದೇ ವೇತನ ಪಡೆಯುತ್ತಿದ್ದು, ಇದನ್ನು ನಿಲ್ಲಿಸಬೇಕು. ಪೌರ ಕಾರ್ಮಿಕರೆಂದು ಕೆಲಸ ಮಾಡಿದ ಈಗಿನ ವಾಹನ ಚಾಲಕರನ್ನು ನೇಮಕ ಮಾಡಿಕೊಳ್ಳಬೇಕು. ಕೆಲಸದಿಂದ ತೆಗೆದು ಹಾಕಿರುವ ಕಾರ್ಮಿಕರನ್ನು ಕೆಲಸಕ್ಕೆ ತೆಗೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಅಧ್ಯಕ್ಷ ಎಸ್‌.ಮಾರೆಪ್ಪ, ಭೀಮರಾಯ ಭಂಡಾರಿ, ಹನುಮಂತ, ಶ್ರೀನಿವಾಸ ಕಲವಲದೊಡ್ಡಿ, ಉರುಕುಂದಪ್ಪ, ಆಂಜನೇಯ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.