ADVERTISEMENT

ಹಾರುಬೂದಿ ಅಕ್ರಮ ಸಾಗಾಣಿಕೆ: ಕ್ರಮಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 1 ಮೇ 2019, 14:21 IST
Last Updated 1 ಮೇ 2019, 14:21 IST
ರಾಯಚೂರಿನ ಆರ್‌ಟಿಪಿಎಸ್‌ನಿಂದ ಹಾರುಬೂದಿ ಅಕ್ರಮ ಸಾಗಾಣಿಕೆ ವಿರುದ್ಧ ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿಗೆ ಬುಧವಾರ ಮನವಿ ಸಲ್ಲಿಸಲಾಯಿತು
ರಾಯಚೂರಿನ ಆರ್‌ಟಿಪಿಎಸ್‌ನಿಂದ ಹಾರುಬೂದಿ ಅಕ್ರಮ ಸಾಗಾಣಿಕೆ ವಿರುದ್ಧ ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿಗೆ ಬುಧವಾರ ಮನವಿ ಸಲ್ಲಿಸಲಾಯಿತು   

ರಾಯಚೂರು: ಆರ್‌ಟಿಪಿಎಸ್‌ ಹಾರುಬೂದಿ ಹೊಂಡದಿಂದ ಅಕ್ರಮವಾಗಿ ಸಾಗಾಣಿಕೆ ಮಾಡಲಾಗುತ್ತಿದೆ. ಪರಿಸರ ಮತ್ತು ಜನಜೀವನದ ಮೇಲೆ ದುಷ್ಪರಿಣಾಮ ಬೀರದ ರೀತಿಯಲ್ಲಿ ಯಾವುದೇ ಕ್ರಮ ವಹಿಸುತ್ತಿಲ್ಲ. ಈ ಬಗ್ಗೆ ಕೂಡಲೇ ಕ್ರಮ ವಹಿಸಬೇಕು ಎಂದು ಜೈ ಕನ್ನಡ ರಕ್ಷಣಾ ವೇದಿಕೆ ಮತ್ತು ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಜಿಲ್ಲಾಧಿಕಾರಿಗೆ ಬುಧವಾರ ಮನವಿ ಸಲ್ಲಿಸಿದರು.

ಪ್ರತಿನಿತ್ಯ 50 ರಿಂದ 60 ಮೆಟ್ರಿಕ್‌ ಟನ್‌ ಹಾರುಬೂದಿ ತೆಗೆದುಕೊಳ್ಳಲಾಗುತ್ತದೆ. ದೈತ್ಯಾಕಾರದ ಲಾರಿಗಳಿಗೆ ಮುಚ್ಚಳಿಕೆ ಇರುವುದಿಲ್ಲ. ಹೀಗಾಗಿ ರಸ್ತೆಗಳ ಅಂಚಿನಲ್ಲಿ ಹಾರುಬೂದಿ ಬೀಳುತ್ತಿದೆ. ಇದರಿಂದಾಗಿ ಜನರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ತಿಳಿಸಲಾಗಿದೆ.

ಆರ್‌ಟಿಪಿಎಸ್‌ ಎಂಜಿನಿಯರುಗಳ ವಿರುದ್ಧ ಕೂಡಲೇ ಕ್ರಮ ಜರುಗಿಸಬೇಕು. ಹಾರುಬೂದಿ ಅಕ್ರಮ ಸಾಗಾಣಿಕೆಯಲ್ಲಿ ಎಲ್ಲರೂ ಶಾಮೀಲಾಗಿದ್ದಾರೆ ಎಂದು ಆರೋಪಿಸಲಾಗಿದೆ. ಕ್ರಮ ಕೈಗೊಳ್ಳದಿದ್ದರೆ ಆರ್‌ಟಿಪಿಎಸ್‌ ಮುಖ್ಯದ್ವಾರದ ಎದುರು ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಲಾಗಿದೆ.

ADVERTISEMENT

ಟಿ.ನರಸಪ್ಪ, ಧರ್ಮರಾಜ್‌ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.