ADVERTISEMENT

ಬಾಕಿ ವೇತನ ನೀಡದಿದ್ದರೆ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2019, 13:51 IST
Last Updated 25 ಸೆಪ್ಟೆಂಬರ್ 2019, 13:51 IST

ರಾಯಚೂರು: ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ವಸತಿ ನಿಲಯಗಳಲ್ಲಿ ಕೆಲಸ ಮಾಡುತ್ತಿರುವ ಹೊರಗುತ್ತಿಗೆ ಸಿಬ್ಬಂದಿಗೆ ಎಂಟು ತಿಂಗಳುಗಳಿಂದ ವೇತನ ನೀಡದೇ ಬಾಕಿ ಉಳಿಸಿಕೊಳ್ಳಲಾಗಿದೆ. ಒಂದು ವಾರದಲ್ಲಿ ವೇತನ ನೀಡದಿದ್ದರೆ ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಪ್ರತಿಭಟನೆ ಮಾಡಲಾಗುತ್ತದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕ ಸಂಚಾಲಕ ಹನುಮಂತಪ್ಪ ಕಾಕರಗಲ್ ಎಚ್ಚರಿಸಿದರು.

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲಸ ಮಾಡಿದರೂ ವೇತನ ಸಿಗದೇ ಸಿಬ್ಬಂದಿ ಜೀವನ ನಡೆಸಲು ಕಷ್ಟ ಪಡುತ್ತಿದ್ದಾರೆ. ಕೆಲಸ ಮಾಡಿಸಿಕೊಳ್ಳುವ ಅಧಿಕಾರಿಗಳು ವೇತನ ಬಗ್ಗೆ ಕೇಳಿದರೆ ಏಜೆನ್ಸಿಯನ್ನು ಕೇಳಿ ಎನ್ನುತ್ತಿದ್ದಾರೆ. ಸರಿಯಾಗಿ ವೇತನ ನೀಡದೇ ಸಿಬ್ಬಂದಿಗೆ ಅನ್ಯಾಯ ಮಾಡಲಾಗಿದೆ ಎಂದು ದೂರಿದರು.

ಈ ಬಗ್ಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ದೂರು ನೀಡಲಾಗುತ್ತಿದೆ. ಸಿಇಒ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಸಿಬ್ಬಂದಿ ಕಷ್ಟ ಅರ್ಥ ಮಾಡಿಕೊಂಡು ಒಂದು ವಾರದಲ್ಲಿ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ನೌಕರರಾದ ಚಂದ್ರು, ಮರಿಯಮ್ಮ, ಶಿವಪ್ಪ, ಮುಖಂಡರಾದ ನಲ್ಲಾರೆಡ್ಡಿ ನಾಯಕ, ಮಹಾದೇವಪ್ಪ ದುಮತಿ, ಶಿವಪ್ಪ ಪಲಕನಮರಡಿ, ಹನುಮಂತ, ಬಸವರಾಜ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.