ADVERTISEMENT

ಪಾದಯಾತ್ರೆಯಲ್ಲಿ ಮೃತಪಟ್ಟ ಮಹಿಳೆಯ ಕುಟುಂಬಕ್ಕೆ ಪರಿಹಾರ ನೀಡಲು ಮನವಿ

​ಪ್ರಜಾವಾಣಿ ವಾರ್ತೆ
Published 28 ಜನವರಿ 2019, 14:47 IST
Last Updated 28 ಜನವರಿ 2019, 14:47 IST
ರಾಯಚೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಜಾಗೃತ ಮಹಿಳಾ ಸಂಘದ ಸದಸ್ಯೆಯರು ಸೋಮವಾರ ಮನವಿ ಸಲ್ಲಿಸಿದರು
ರಾಯಚೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಜಾಗೃತ ಮಹಿಳಾ ಸಂಘದ ಸದಸ್ಯೆಯರು ಸೋಮವಾರ ಮನವಿ ಸಲ್ಲಿಸಿದರು   

ರಾಯಚೂರು: ರಾಜ್ಯದಲ್ಲಿ ಸಂಪೂರ್ಣವಾಗಿ ಮದ್ಯ ನಿಷೇಧ ಮಾಡಲು ಒತ್ತಾಯಿಸಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಮಹಿಳೆಯರು ನಡೆಸುತ್ತಿರುವ ಪಾದಯಾತ್ರೆಯಲ್ಲಿ ಲಿಂಗಸುಗೂರು ತಾಲ್ಲೂಕಿನ ಖೈಲವಾಡಿಗಿ ಗ್ರಾಮದ ರೇಣುಕಮ್ಮ (55) ಬೈಕ್ ಅಪಘಾತದಿಂದ ಮೃತಪಟ್ಟಿದ್ದು, ಕುಟುಂಬದವರಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಜಾಗೃತ ಮಹಿಳಾ ಸಂಘಟನೆ ಸದಸ್ಯರು ಜಿಲ್ಲಾ ಉಸ್ತುವಾರಿ ಸಚಿವರಿಗೆ ಸೋಮವಾರ ಮನವಿ ಸಲ್ಲಿಸಿದರು.

ಸಮಾಜದ ಸ್ವಾಸ್ಥ್ಯ ಉಳಿಯಲು ಮದ್ಯ ನಿಷೇಧ ಮಾಡಬೇಕು ಎಂದು ಆಗ್ರಹಿಸಿ ಚಿತ್ರದುರ್ಗದಿಂದ ಜನವರಿ 19ರಿಂದ ಬೆಂಗಳೂರಿಗೆ ಪಾದಯಾತ್ರೆ ನಡೆಸುತ್ತಿದ್ದಾರೆ. ಈಗಾಗಲೇ ಸ್ಥಳೀಯ ಮಟ್ಟದಲ್ಲಿ ಮನವಿಗಳನ್ನು ಸಲ್ಲಿಸಲಾಗಿದೆ. ಅಹವಾಲುಗಳಿಗೆ ಮನ್ನಣೆ ನೀಡಿ ಮದ್ಯ ನಿಷೇಧ ಮಾಡಬೇಕು ಎಂದು ಮನವಿ ಮಾಡಿದರು.

ಮಹಿಳೆಯರನ್ನು ಗೌರವದಿಂದ ನಡೆಸಿಕೊಂಡು ಅವರನ್ನು ಊರುಗಳಿಗೆ ಮರಳಿಸಿಕೊಡಬೇಕು. ಸರ್ಕಾರದ ನಿರ್ಲಕ್ಷ್ಯದಿಂದ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಇದಕ್ಕೆ ಸರ್ಕಾರವೇ ನೇರ ಹೊಣೆಯಾಗಿದೆ ಎಂದು ದೂರಿದರು.

ಮುಖಂಡರಾದ ಸೈಯದ್ ಹಫೀಜುಲ್ಲಾ, ಸುಶೀಲಮ್ಮ, ಕರಿಯಪ್ಪ, ದೇವಪುತ್ರ, ಶೃತಿ, ಶ್ವತಾ, ಶಭಾನ, ನರಸಮ್ಮ, ಸುನಂದಮ್ಮ, ಮುದ್ದಮ್ಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.