ADVERTISEMENT

ವಿದ್ಯಾರ್ಥಿನಿ ಕೊಲೆ: ತನಿಖೆಗೆ ಸಾಹಿತಿ ಕುಂವೀ ಒತ್ತಾಯ

​ಪ್ರಜಾವಾಣಿ ವಾರ್ತೆ
Published 24 ಜೂನ್ 2019, 12:52 IST
Last Updated 24 ಜೂನ್ 2019, 12:52 IST
ಕುಂ. ವೀರಭದ್ರಪ್ಪ
ಕುಂ. ವೀರಭದ್ರಪ್ಪ   

ರಾಯಚೂರು: ‘ನಗರದಲ್ಲಿ ಈಚೆಗೆ ನಡೆದ ಎಂಜಿನಿಯರಿಂಗ್ ವಿದ್ಯಾರ್ಥಿನಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೇಲ್ನೋಟಕ್ಕೆ ಆತ್ಮಹತ್ಯೆ ಎನ್ನುವ ನಿರ್ಧಾರಕ್ಕೆ ಬರಬಾರದು. ಈ ಬಗ್ಗೆ ಕೂಲಂಕಷ ತನಿಖೆ ನಡೆಸಬೇಕು’ ಎಂದು ಕಥೆಗಾರ ಕುಂ. ವೀರಭದ್ರಪ್ಪ ಒತ್ತಾಯಿಸಿದರು.

ಮೃತ ವಿದ್ಯಾರ್ಥಿನಿ ಪಾಲಕರನ್ನು ಸೋಮವಾರ ಭೇಟಿ ಮಾಡಿ ಸಾಂತ್ವನ ಹೇಳಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

‘ನ್ಯಾಯಕ್ಕಾಗಿ ಒತ್ತಾಯಿಸಿ ಮುಂಬರುವ ದಿನಗಳಲ್ಲಿ ಚಿತ್ರನಟ ಪ್ರಕಾಶ ರೈ ಸೇರಿದಂತೆ ವಿವಿಧ ಮಹಿಳಾ ಸಂಘಟನೆಗಳ ನೇತೃತ್ವದಲ್ಲಿ ಹೋರಾಟ ಆರಂಭಿಸಲಾಗುವುದು’ ಎಂದರು.

ADVERTISEMENT

'ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆ ಸಿಗಬೇಕು. ಈ ವಿದ್ಯಾರ್ಥಿನಿಯು ರಕ್ಷಣೆ ಇಲ್ಲದಕ್ಕಾಗಿ ಸಾವನ್ನಪ್ಪಿದ್ದಾಳೆ. ರಾಯಚೂರು ಕರ್ನಾಟಕದಲ್ಲಿದೆ. ಇದು ಉತ್ತರ ಪ್ರದೇಶ ಅಥವಾ ಬಿಹಾರವಲ್ಲ. ಈ ವಿದ್ಯಾರ್ಥಿನಿ ಮೇಲೆ ನಡೆದ ಹಲ್ಲೆ ಮತ್ತು ಕೊಲೆಯು ನಾಗರಿಕ ಸಮಾಜ ತಲೆತಗ್ಗಿಸುವಂತದ್ದಾಗಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.