ADVERTISEMENT

ಹಲ್ಲೆ; ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 4 ಜನವರಿ 2020, 14:02 IST
Last Updated 4 ಜನವರಿ 2020, 14:02 IST
ರಾಯಚೂರಿನ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕನ ಮೇಲಿನ ಹಲ್ಲೆಯನ್ನು ಖಂಡಿಸಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಜಿಲ್ಲಾ ಘಟಕದಿಂದ ಶನಿವಾರ ಪ್ರತಿಭಟನೆ ನಡೆಸಿ, ಆರೋಪಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು
ರಾಯಚೂರಿನ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕನ ಮೇಲಿನ ಹಲ್ಲೆಯನ್ನು ಖಂಡಿಸಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಜಿಲ್ಲಾ ಘಟಕದಿಂದ ಶನಿವಾರ ಪ್ರತಿಭಟನೆ ನಡೆಸಿ, ಆರೋಪಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು   

ರಾಯಚೂರು: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಆರೋಪಿಗಳನ್ನು ಕೂಡಲೇ ಗುಂಡಾ ಕಾಯ್ದೆ ಅಡಿ ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಸದಸ್ಯರು ಜಿಲ್ಲಾ ಘಟಕದಿಂದ ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ನಗರದ ಕೋಟೆ ಮುಂಗ್ಲಿ ಪ್ರಾಣದೇವರ ದೇವಸ್ಥಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಪ್ರತಿಭಟನೆ ಜಾಥಾ ನಡೆಸಿ, ಆನಂತರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕ ಪ್ರಾಣೇಶ್ ಕುಲಕರ್ಣಿ ಅವರ ಮೇಲೆ ರಂಜಿತ್ ಗೌಡ ಮತ್ತು ಇವರ ಸಂಗಡಿಗರು ಈಚೆಗೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಈಗಾಗಲೇ ಸ್ಥಳೀಯ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ಶೀಘ್ರವೇ ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

ADVERTISEMENT

ವಿಳಂಬವಾದರೇ ರಾಜ್ಯದಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದರು. ಜಿಲ್ಲಾ ಘಟಕದ ಅಧ್ಯಕ್ಷ ಜಗನ್ನಾಥ ಕುಲಕರ್ಣಿ, ಗುರುರಾಜ ಆಚಾರ್ಯ, ತ್ರಿವಿಕ್ರಮ ಜೋಷಿ, ಸುರೇಂದ್ರ ದಿಗ್ಗಾವಿ, ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.