ADVERTISEMENT

ರಾಯಚೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2020, 12:26 IST
Last Updated 4 ಡಿಸೆಂಬರ್ 2020, 12:26 IST
ರಾಯಚೂರಿನಲ್ಲಿ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಶುಕ್ರವಾರ ಮನವಿ ಸಲ್ಲಿಸಿದರು
ರಾಯಚೂರಿನಲ್ಲಿ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಶುಕ್ರವಾರ ಮನವಿ ಸಲ್ಲಿಸಿದರು   

ರಾಯಚೂರು: 2021ರ ಬಜೆಟ್‍ನಲ್ಲಿ ದೇವದಾಸಿ ವಿಮುಕ್ತ ಮಹಿಳೆಯರಿಗೆ ಮಾಸಿಕ ಸಹಾಯಧನ ₹5 ಸಾವಿರಕ್ಕೆ ಹೆಚ್ಚಿಸಬೇಕು. ಗಣತಿಯಲ್ಲಿ ಬಿಟ್ಟುಹೋದ ಮಹಿಳೆಯರ ಹೆಸರನ್ನು ತಕ್ಷಣವೇ ಹೆಸರು ಸೇರಿಸಬೇಕು ಎನ್ನುವುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರುಶುಕ್ರವಾರ ಪ್ರತಿಭಟನೆ ನಡೆಸಿದರು.

ಆನಂತರ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿ, ಕಳೆದ ನಾಲ್ಕು ವರ್ಷಗಳಿಂದ ದೇವದಾಸಿಯರ ವಿವಿಧ ಹಕ್ಕೊತ್ತಾಯಗಳನ್ನು ಬಜೆಟ್‍ನಲ್ಲಿ ಪರಿಗಣಿಸುತ್ತಿಲ್ಲ. ಮಾಸಿಕ ಸಹಾಯಧನ ಪಿಂಚಣಿಯನ್ನು ಕನಿಷ್ಠ₹5,000 ಗಳಿಗೆ ಹೆಚ್ಚಳ ಮಾಡಲು ಬರೀ ಭರವಸೆ ನೀಡಲಾಗುತ್ತಿದೆ. ಮುಂಬರುವ ಬಜೆಟ್‍ನಲ್ಲಿ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದರು.

ದೇವದಾಸಿ ಮಹಿಳೆಯರ ಮಕ್ಕಳು ಪರಸ್ಪರ ವಿವಾಹವಾದಾಗಲೂ ಪ್ರೋತ್ಸಾಹಧನ ನೀಡಬೇಕು. ವಿವಾಹದ ಪ್ರೋತ್ಸಾಹಧನ ನೀಡುವ ಷರತ್ತುಗಳನ್ನು ಕೈಬಿಡಬೇಕು. ದೇವದಾಸಿ ವಿಮುಕ್ತ ಮಹಿಳೆಯರಿಗೆ ನೀಡುತ್ತಿರುವ ಭೂಮಿಯ ಮಿತಿಯನ್ನು ಕನಿಷ್ಠ 5 ಎಕರೆ ನೀರಾವರಿ ಜಮೀನಿಗೆ ಹೆಚ್ಚಿಸಿ, ಪ್ರತಿ ವರ್ಷ ಪ್ರತಿ ತಾಲ್ಲೂಕಿನ ಕನಿಷ್ಠ 100 ಫಲಾನುಭವಿಗಳಿಗೆ ಜಮೀನು ದೊರೆಯುವಂತೆ ಬಜೆಟ್‌ನಲ್ಲಿ ಅವಕಾಶ ಒದಗಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ಸಂಘದ ಗೌರವಾಧ್ಯಕ್ಷ ಕೆ.ಜಿ ವಿರೇಶ, ಜಿಲ್ಲಾಧ್ಯಕ್ಷೆ ಎಚ್.ಪದ್ಮಾ, ತಾಲ್ಲೂಕು ಕಾರ್ಯದರ್ಶಿ ಜೆ.ತಾಯಮ್ಮ, ರಂಗಮ್ಮ, ಯಂಕಮ್ಮ, ನರಸಮ್ಮ, ನಾಗಮ್ಮ, ಪಾರ್ವತಮ್ಮ, ಮಹಾದೇವಮ್ಮ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.