ADVERTISEMENT

ರಾಯಚೂರು: ಶಾಲೆಯಲ್ಲಿ 6 ದಿನವೂ ಮೊಟ್ಟೆ ವಿತರಿಸಲು ಆಗ್ರಹ

ಗ್ರಾಮೀಣ ಕೂಲಿಕಾರರ ಸಂಘಟನೆ (ಗ್ರಾಕೂಸ್)ಯಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2021, 13:32 IST
Last Updated 20 ಡಿಸೆಂಬರ್ 2021, 13:32 IST
ರಾಯಚೂರಿನ ಟಿಪ್ಪುಸುಲ್ತಾನ್ ಉದ್ಯಾನದಲ್ಲಿ ಗ್ರಾಮೀಣ ಕೂಲಿಕಾರರ ಸಂಘಟನೆಯಿಂದ ಸೋಮವಾರ ಪತ್ರಿಭಟನೆ ನಡೆಸಲಾಯಿತು
ರಾಯಚೂರಿನ ಟಿಪ್ಪುಸುಲ್ತಾನ್ ಉದ್ಯಾನದಲ್ಲಿ ಗ್ರಾಮೀಣ ಕೂಲಿಕಾರರ ಸಂಘಟನೆಯಿಂದ ಸೋಮವಾರ ಪತ್ರಿಭಟನೆ ನಡೆಸಲಾಯಿತು   

ರಾಯಚೂರು: ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಬಿಸಿಯೂಟದ ಜೊತೆ ವಾರದಲ್ಲಿ 3 ದಿನ ಮೊಟ್ಟೆ ನೀಡುತ್ತಿರುವುದನ್ನು ಆರು ದಿನಗಳಿಗೆ ವಿಸ್ತರಿಸಬೇಕು ಎಂದು ಒತ್ತಾಯಿಸಿ ಗ್ರಾಮೀಣ ಕೂಲಿಕಾರರ ಸಂಘಟನೆ (ಗ್ರಾಕೂಸ್)ಯಿಂದ ನಗರದ ಟಿಪ್ಪುಸುಲ್ತಾನ್ ಉದ್ಯಾನದಲ್ಲಿ ಪತ್ರಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆಸೋಮವಾರ ಮನವಿ ಸಲ್ಲಿಸಿದರು.

ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಪ್ರಾಥಮಿಕ ಶಾಲೆಗಳಲ್ಲಿ ಸರ್ಕಾರವು ಮಕ್ಕಳಿಗೆ ಮೊಟ್ಟೆ ನೀಡುತ್ತಿರುವುದು ಶ್ಲಾಘನೀಯ. ಮೂರು ದಿನಗಳ ಬದಲಿಗೆ ವಾರದ ಆರು ದಿನಗಳು ಮೊಟ್ಟೆ ವಿತರಿಸಬೇಕು. ಗ್ರಾಮೀಣ ಕೃಷಿ ಕೂಲಿಕಾರ್ಮಿಕರ ಸಂಘಟನೆಯ ಕಾರ್ಯಕರ್ತರು ಸುಮಾರು 21 ಜಿಲ್ಲೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

ಬಹುತೇಕ ಮಕ್ಕಳು ಸರ್ಕಾರಿ ಶಾಲೆಯಲ್ಲಿ ಅಭ್ಯಾಸ ಮಾಡುತ್ತಿದ್ದಾರೆ. ಸರ್ಕಾರದ ಮೊಟ್ಟೆ ಯೋಜನೆ ಮಕ್ಕಳ ಪೌಷ್ಟಿಕ ಆಹಾರಕ್ಕೆ ಸಹಕಾರಿಯಾಗಿದೆ. ವಾರದಲ್ಲಿ ಆರು ದಿನ ಮೊಟ್ಟೆ ವಿತರಿಸಿ ಎಲ್ಲಾ ಜಿಲ್ಲೆಗಳಿಗೆ ವಿಸ್ತರಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ಪ್ರತಿಭಟನೆಯಲ್ಲಿ ಗ್ರಾಕೂಸ್ ಸಂಚಾಲಕಿ ವಿದ್ಯಾಪಾಟೀಲ, ಗುರುರಾಜ, ಮಾರೆಮ್ಮ, ಈರಮ್ಮ, ಮಲ್ಲಮ್ಮ, ದೇವಮಣಿ, ಬಸವರಾಜ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.