ADVERTISEMENT

ನ್ಯಾ.ಸದಾಶಿವ ಆಯೋಗದ ವರದಿ ಜಾರಿಗೊಳಿಸಿ: ಮಾದಿಗ ಮೀಸಲಾತಿ ಹೋರಾಟ ಸಮಿತಿ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2021, 15:12 IST
Last Updated 17 ಸೆಪ್ಟೆಂಬರ್ 2021, 15:12 IST
ರಾಯಚೂರು ಜಿಲ್ಲಾಧಿಕಾರಿ ಕಚೇರಿ ಎದುರು ಮಾದಿಗ ದಂಡೋರಾ ಮಾದಿಗ ಮೀಸಲಾತಿ ಹೋರಾಟ ಸಮಿತಿಯ ಪದಾಧಿಕಾರಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು
ರಾಯಚೂರು ಜಿಲ್ಲಾಧಿಕಾರಿ ಕಚೇರಿ ಎದುರು ಮಾದಿಗ ದಂಡೋರಾ ಮಾದಿಗ ಮೀಸಲಾತಿ ಹೋರಾಟ ಸಮಿತಿಯ ಪದಾಧಿಕಾರಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು   

ರಾಯಚೂರ: ವಿಧಾನಸಭಾ ಅಧಿವೇಶನದಲ್ಲಿ ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿಯನ್ನು ಯತಾವತ್ತಾಗಿ ಜಾರಿಗೊಳಿಸಿ ಕೇಂದ್ರಕ್ಕೆ ಶಿಫಾರಸು ಮಾಡಬೇಕು ಎಂದು ಆಗ್ರಹಿಸಿ ಮಾದಿಗ ದಂಡೋರಾ ಮಾದಿಗ ಮೀಸಲಾತಿ ಹೋರಾಟ ಸಮಿತಿಯ ಪದಾಧಿಕಾರಿಗಳು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ನ್ಯಾ.ಎ.ಜೆ ಸದಾಶಿವ ಆಯೋಗದ ವರದಿಯನ್ನು ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡದೇ ಸಂಪೂರ್ಣವಾಗಿ ನಿರ್ಲಕ್ಷ್ಯವಹಿಸಿದ್ದಾರೆ. ಮಾದಿಗ ಸಮುದಾಯ ಆರ್ಥಿಕ, ಶೈಕ್ಷಣಿಕ, ರಾಜಕೀಯ ಹಾಗೂ ಉದ್ಯೋಗಳಿಂದ ವಂಚಿತವಾಗುತ್ತಿದೆ. ಒಳಮೀಸಲಾತಿಯ ವರದಿಯ ಸಿದ್ಧವಾಗಿದೆ. ಜಾರಿಯಾಗಲು ಸರ್ಕಾರದ ಮಟ್ಟದಲ್ಲಿದೆ. ಈ ವರದಿಯಲ್ಲಿ ಮಾದಿಗ ಮತ್ತು ಮಾದಿಗ ಉಪಜಾತಿಗಳ ಸ್ಥಿತಿಗತಿಗಳ ಅಧ್ಯಯನದಿಂದ ಜಾತಿ ಜನಸಂಖ್ಯೆವಾರು ಮೀಸಲಾತಿಯು ಕಲ್ಪಿಸಲಾಗಿದೆ. ಆದರೆ, ಕೆಲವು ಸ್ಪಶ್ಯ ಜಾತಿಗಳು ಸದಾಶಿವ ಆಯೋಗದ ವರದಿ ಜಾರಿಯಾಗದಂತೆ ಸರ್ಕಾರದ ಮೇಲೆ ಒತ್ತಡ ಹಾಕುತ್ತಿದೆ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಮಾದಿಗ ಮಿಸಲಾತಿ ಹೋರಾಟ ಸಮಿತಿಯ ರಾಜ್ಯಾದ್ಯಕ್ಷ ನರಸಪ್ಪ ದಂಡೋರಾ, ಸಮಿತಿಯ ಜಿಲ್ಲಾಧ್ಯಕ್ಷ ಮಾನಪ್ಪ ಮೇಸ್ತ್ರಿ, ಕಾರ್ಯಧ್ಯಕ್ಷ ಎಸ್.ನರಸಿಂಹಲು ಮತ್ತಿತರರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.