ADVERTISEMENT

ನ್ಯಾ. ಸದಾಶಿವ ವರದಿ ಜಾರಿಗಾಗಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2020, 13:58 IST
Last Updated 5 ಸೆಪ್ಟೆಂಬರ್ 2020, 13:58 IST
ರಾಯಚೂರಿನಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ( ಪ್ರೋ.ಬಿ.ಕೃಷ್ಣಪ್ಪ ಸ್ಥಾಪಿತ)  ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು
ರಾಯಚೂರಿನಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ( ಪ್ರೋ.ಬಿ.ಕೃಷ್ಣಪ್ಪ ಸ್ಥಾಪಿತ)  ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು   

ರಾಯಚೂರು: ರಾಜ್ಯ ಸರ್ಕಾರ ಕೂಡಲೇ ಸುಪ್ರಿಂಕೋರ್ಟ್ ಆದೇಶದಂತೆ ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗ ವರದಿಯನ್ನು ಅನುಷ್ಠಾನಗೊಳಿಸಿ ಒಳ ಮೀಸಲಾತಿ ಕಲ್ಪಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು.

ಆನಂತರ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿ, ಅಗಸ್ಟ್ 27 ರಂದು ಸುಪ್ರೀಂಕೋರ್ಟ್‌ನಲ್ಲಿ ಐದು ನ್ಯಾಯಾಧೀಶರ ಪೀಠ ಒಳ ಮೀಸಲಾತಿ ಕಾಯ್ದೆಯನ್ನು ಜಾರಿಗೊಳಿಸುವ ಅಧಿಕಾರವು ರಾಜ್ಯ ಸರ್ಕಾರಗಳಗೆ ಇದೆ ಎಂದು ತೀರ್ಪು ನೀಡಿದ್ದು ಸ್ವಾಗತಾರ್ಹವಾಗಿದೆ.

ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳು ಪರಿಶಿಷ್ಟ ಪಂಗಡಗಳ ಸಂವಿಧಾನಾತ್ಮಕ ಹಕ್ಕುಗಳ ಅನುಷ್ಠಾನಕ್ಕಾಗಿ ಸುಮಾರು 45 ವರ್ಷಗಳಿಂದ ದಲಿತಪರ ಸಂಘಟನೆಗಳಿಂದ ಹೋರಾಟ ಮಾಡಿದ್ದಾರೆ. ಶೇ 15 ರಷ್ಟು ಮಿಸಲಾತಿ ಜನಸಂಖ್ಯೆ ಆಧಾರಿತವಾಗಿ ಹಂಚಿಕೊಳ್ಳಲು ಮೂರು ದಶಕದಿಂದ ಹೋರಾಟ ಮಾಡಿದ ಇತಿಹಾಸವಿದೆ ಎಂದರು.

ADVERTISEMENT

ಕೂಡಲೇ ಕ್ಯಾಬಿನೆಟ್ ಸಚಿವರನ್ನು ಒಗ್ಗೂಡಿಸಿ ಮುಂದಿನ ಸದನದಲ್ಲಿ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗ ವರದಿ ಮಂಡಿಸಿ ಒಳ ಮೀಸಲಾತಿ ಕಾನೂನು ಜಾರಿಗೆ ತರಲು ನಿರ್ಣಯ ಕೈಗೊಂಡು ಸರ್ಕಾರ ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿದರು.

ಸಂಘದ ಸಂಚಾಲಕ ಶಿವರಾಜ್ ಘಂಟಿ, ರಾಜು ಬೊಮ್ಮನಾಳ, ಹನುಮಂತ, ಭೀಮಪ್ಪ ,ನಾಗಪ್ಪ, ದುರ್ಗಪ್ಪ ತಿಮ್ಮಪ್ಪ, ಜೆ.ಬಿ. ರಾಜ, ಬುರ್ರಪ್ಪ ಮಾರೆಡ್ಡಿ, ಭೀಮಪ್ಪ, ದುರುಗಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.