ADVERTISEMENT

ರಾಯಚೂರು| ಆಶಾ ಕಾರ್ಯಕರ್ತೆಯರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 24 ಜುಲೈ 2020, 13:44 IST
Last Updated 24 ಜುಲೈ 2020, 13:44 IST

ರಾಯಚೂರು: ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹12 ಸಾವಿರ ಗೌರವಧನ ಕೊಡಬೇಕು. ಕೋವಿಡ್–19 ನಿಂದ ರಕ್ಷಣೆಗೆ ಸುರಕ್ಷತಾ ಸಾಮಗ್ರಿಗಳನ್ನು ನೀಡಬೇಕು. ಕೋವಿಡ್‌ಗೆ ತುತ್ತಾದ ಆಶಾಗೆ ಪರಿಹಾರ ಮತ್ತು ಉಚಿತ ಚಿಕಿತ್ಸೆ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಝ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ( ಎಐಯುಟಿಯುಸಿ ಸಂಯೋಜಿತ)ದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

ರಾಜ್ಯಾವ್ಯಾಪಿ ಕಳೆದ 15 ದಿನಗಳಿಂದ ತಾಲ್ಲೂಕು, ಜಿಲ್ಲಾ ಮಟ್ಟದಲ್ಲಿ ಆಶಾಗಳು ಸೇವೆ ಸ್ಥಗಿತಗೊಳಿಸಿ ಅನಿರ್ಧಿಷ್ಟ ಹೋರಾಟ ಮಾಡುತ್ತಿದ್ದರೂ ರಾಜ್ಯ ಸರ್ಕಾರ ಆಶಾ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ. ಈ ಹಿಂದೆ ವೈದ್ಯಕೀಯ ಸಚಿವ ಡಾ.ಸುಧಾಕರ್ ಅವರು ಚರ್ಚೆ ನಡೆಸಿ ಎರಡು ಮೂರು ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದರೂ ಈಗಪ್ರತಿಕ್ರಿಯೆ ನೀಡಿಲ್ಲ ಎಂದು ದೂರಿದರು.

ಸಂಘದ ಜಿಲ್ಲಾ ಅಧ್ಯಕ್ಷ ವೀರೇಶ ಎನ್. ಎಸ್, ಕಾರ್ಯದರ್ಶಿ ಈರಮ್ಮ, ಸಾಜಿದಾ ಬೇಗಂ, ರಾಘಮ್ಮ, ಜುಲೇಖಾ, ರಾಧಮ್ಮ, ಗಿರಿಜಮ್ಮ, ನಸೀಮಾ, ಶಾರದಾ, ನಾಗಮ್ಮ, ಚೈತ್ರ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.