ರಾಯಚೂರು: ಕೊರೊನಾ ವಿರುದ್ಧ ಹೋರಾಡುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ₹ 12 ಸಾವಿರ ಗೌರವಧನ ಖಾತರಿಪಡಿಸಬೇಕು ಎಂದು ಒತ್ತಾಯಿಸಿ ಜುಲೈ 10 ರಂದು ರಾಜ್ಯದಾದ್ಯಂತ ಅಶಾ ಕಾರ್ಯಕರ್ತೆಯರು ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ಮಾಡಲಿದ್ದಾರೆ ಎಂದು ಕರ್ನಾಟಕ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ (ಎಐಯುಟಿಯುಸಿ ಸಂಯೋಜಿತ)ಜಿಲ್ಲಾ ಸಮಿತಿಯ ಅಧ್ಯಕ್ಷ ವೀರೇಶ ಎನ್.ಎಸ್. ತಿಳಿಸಿದರು.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಇತ್ತೀಚೆಗೆ ಕೊರೊನಾ ವಿರುದ್ಧದ ಹೋರಾಟದಲ್ಲಿ ರಾಜ್ಯದ ಆಶಾ ಕಾರ್ಯಕರ್ತೆಯರ ಸೇವೆ ಮಾದರಿ ಎಂದು ಹೇಳಿದ್ದು ಗಮನಾರ್ಹ. ಇವರು ಕೊರೊನಾ ಹೋರಾಟದ ಯಶಸ್ವಿಗೆ ಆಧಾರ ಸ್ತಂಭವಾಗಿದ್ದಾರೆ. ಮನೆ ಮನಗೆ ಹೋಗಿ ಸ್ಕ್ರೀನಿಂಗ್, ತಪಾಸಣೆ, ಸೋಂಕಿತರ ಸಮೀಕ್ಷೆ ಇತ್ಯಾದಿ ಕೆಲಸ ಮಾಡುತ್ತಿದ್ದಾರೆ. ಸರ್ಕಾರ ಇವರ ಕೆಲಸವನ್ನು ಗಮನಿಸಿ ಸನ್ಮಾನದಿಂದ ಗೌರವಿಸುತ್ತಿದೆ ವಿನಾವೇತನ ಹೆಚ್ಚಳಕ್ಕೆ ಮುಂದಾಗಿಲ್ಲ ಎಂದು ದೂರಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಘದ ಕಾರ್ಯದರ್ಶಿ ಈರಮ್ಮ, ಪ್ರಭಾವತಿ, ರೇಣುಕಾ, ರಾಘಮ್ಮ, ಸಾಜೀದಾ, ಭಾರತಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.