ADVERTISEMENT

 ಬ್ಯಾಂಕ್ ಸಿಬ್ಬಂದಿ ಸಾವು: ತನಿಖೆಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2020, 8:36 IST
Last Updated 6 ಆಗಸ್ಟ್ 2020, 8:36 IST
ರಾಯಚೂರಿನಲ್ಲಿ ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಡಳಿತಕ್ಕೆ ಗುರುವಾರ ಮನವಿ ಸಲ್ಲಿಸಿದರು
ರಾಯಚೂರಿನಲ್ಲಿ ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಡಳಿತಕ್ಕೆ ಗುರುವಾರ ಮನವಿ ಸಲ್ಲಿಸಿದರು   

ರಾಯಚೂರು: ನಗರದ ಆಶಾಪುರ ರಸ್ತೆಯ ಅಮರೇಶ್ವರ ನಗರದ ಬಾಡಿಗೆ ಮನೆಯಲ್ಲಿ ತಾಲ್ಲೂಕಿನ ತುಂಗಭಧ್ರಾ ಕ್ಯಾಂಪ್ ಗ್ರಾಮದ ಇಂದಿರಾ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಅನುಮಾನಕ್ಕೆ ಕಾರಣವಾಗಿದೆ. ಈ ಬಗ್ಗೆಸಮಗ್ರವಾಗಿ ತನಿಖೆ ನಡೆಸಬೇಕು ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಡಳಿತಕ್ಕೆ ಗುರುವಾರ ಮನವಿ ಸಲ್ಲಿಸಿದರು.

ನಗರದ ಎಸ್‌ಬಿಐ ಮುಖ್ಯ ಶಾಖೆಯ ನೌಕರರಾಗಿದ್ದ ಇಂದಿರಾ ಅವರೊಂದಿಗೆ ಅದೇ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದ ಉದ್ಯೋಗಿ ಅನೈತಿಕ ಸಂಬಂಧ ಬೆಳೆಸಿದ್ದ. ಗರ್ಭಿಣಿಯಾಗಿದ್ದ ಇಂದಿರಾಳನ್ನು ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾನೆ ಎಂದು ಆರೋಪಿಸಿದರು.

ಇಂದಿರಾ ವಾಸವಿದ್ದ ಮನೆಯ ಸಿಸಿಟಿವಿ ಫುಟೇಜ್, ದೂರವಾಣಿ ಸಂಭಾಷಣೆ, ವೈದ್ಯಕೀಯ ದಾಖಲೆ ಪರಿಶೀಲಿಸಿ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ADVERTISEMENT

ಸಂಘದ ಅಧ್ಯಕ್ಷ ಯಲ್ಲಪ್ಪ ಜಾಲಿಬೆಂಚಿ, ಕಾರ್ಯದರ್ಶಿ ತಿಮ್ಮಪ್ಪ ನಾಯಕ, ಶಿವರಾಜ ಮೇಟಿಗೌಡ, ಗಿರಿಯಪ್ಪ ದಿನ್ನಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.