ADVERTISEMENT

ಅತ್ಯಾಚಾರ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2019, 12:26 IST
Last Updated 3 ಡಿಸೆಂಬರ್ 2019, 12:26 IST
ರಾಯಚೂರಿನಲ್ಲಿ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದಿಂದ ಪಶುವೈದ್ಯೆ ಪ್ರಿಯಾಂಕರೆಡ್ಡಿ ಅತ್ಯಾಚಾರ, ಕೊಲೆ ಖಂಡಿಸಿ, ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು
ರಾಯಚೂರಿನಲ್ಲಿ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದಿಂದ ಪಶುವೈದ್ಯೆ ಪ್ರಿಯಾಂಕರೆಡ್ಡಿ ಅತ್ಯಾಚಾರ, ಕೊಲೆ ಖಂಡಿಸಿ, ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು   

ರಾಯಚೂರು: ಹೈದರಾಬಾದ್‌ನಲ್ಲಿಸಾಮೂಹಿಕ ಅತ್ಯಾಚಾರ, ಕೊಲೆ ಮಾಡಿದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ, ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕವು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು.

ಜಿಲ್ಲಾಧಿಕಾರಿ ಕಚೇರಿಯ ಸ್ಥಾನಿಕ ಅಧಿಕಾರಿಗಳ ಮುಖಾಂತರ ಪ್ರಧಾನಮಂತ್ರಿಗೆ ಮಂಗಳವಾರ ಮನವಿ ಸಲ್ಲಿಸಿದರು.

ಹೈದ್ರಾಬಾದ್ ಮೂಲದ ಪಶುವೈದ್ಯೆ ಪ್ರಿಯಾಂಕರೆಡ್ಡಿ ಅವರನ್ನು ನಾಲ್ಕು ಜನ ಸೇರಿ ಸಾಮೂಹಿಕ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾರೆ. ಇಂತಹ ಪ್ರಕರಣಗಳು ದಿನನಿತ್ಯ ಹೆಚ್ಚುತ್ತಿದ್ದು, ದೇಶದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ನಿತ್ಯ ಹೊರಗಡೆ ಕೆಲಸಕ್ಕೆ ತೆರಳುವ ಮಹಿಳೆಯರು ಹೆದರುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

ADVERTISEMENT

ಇಂತಹ ಪ್ರಕರಣಗಳನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಕಾನೂನು ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.

ಇಮ್ರಾನ್ ಬಡೆಸಾಬ್, ಆಲಂ ಗಬ್ಭೂರು, ಅಲ್ತಾಫ್, ಸೈಯದ್, ಗೌತಮ್, ನಾಗೇಶ್, ರಾಮು, ಫಾರುಕ್ ಪಟೇಲ, ಸುಷ್ಮಾ ಹಾಗೂ ವಿದ್ಯಾರ್ಥಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.