ರಾಯಚೂರು: ನಗರದ ತೀನ್ ಖಂದಿಲ್ ವೃತ್ತದಿಂದ ಅಶೋಕ ಡಿಪೋ ವೃತ್ತದವರೆಗೆ ರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರಕ್ಕೆ ಸಮಸ್ಯೆಯಾಗಿ ಅಪಘಾತಗಳಿಗೆ ಎಡೆಮಾಡಿಕೊಡುತ್ತಿದೆ.
ಈ ರಸ್ತೆಯ ಅಗಲೀಕರಣ ಹಾಗೂ ರಸ್ತೆ ನಿರ್ಮಾಣಕ್ಕೆ ₹4.30 ಕೋಟಿ ಮಂಜೂರಾಗಿದೆ. ಕೂಡಲೇ ಜಿಲ್ಲಾಡಳಿತ ನಗರೋತ್ಥಾನ ಯೋಜನೆಯಡಿ ಕಾಮಗಾರಿ ಆರಂಭಿಸಬೇಕು ಎಂದು ಉಸ್ಮಾನಿಯಾ ತರಕಾರಿ ಮಾರಾಟಗಾರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎನ್.ಮಹಾವೀರ್, ಪ್ರಭುನಾಯಕ, ಉದಯ ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.