ADVERTISEMENT

ರಾಯಚೂರು ನಗರ ಟಿಕೆಟ್‌ ಮುಸಲ್ಮಾನರಿಗೆ ನೀಡಿ: ಅಂಜುಮನ್‌ ಎ–ರಾಯಚೂರು ಸಂಘಟನೆ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2021, 13:48 IST
Last Updated 18 ಆಗಸ್ಟ್ 2021, 13:48 IST
ರಾಯಚೂರು ನಗರ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸುವುದಕ್ಕೆ ಮುಸಲ್ಮಾನರಿಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಟಿಪ್ಪು ಸುಲ್ತಾನ್‌ ಉದ್ಯಾನದಲ್ಲಿ ಅಂಜುಮನ್‌ ಎ– ರಾಯಚೂರು ಸಂಘಟನೆಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು
ರಾಯಚೂರು ನಗರ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸುವುದಕ್ಕೆ ಮುಸಲ್ಮಾನರಿಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಟಿಪ್ಪು ಸುಲ್ತಾನ್‌ ಉದ್ಯಾನದಲ್ಲಿ ಅಂಜುಮನ್‌ ಎ– ರಾಯಚೂರು ಸಂಘಟನೆಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು   

ರಾಯಚೂರು: ರಾಯಚೂರು ನಗರ ವಿಧಾನಸಭಾ ಕ್ಷೇತ್ರದಲ್ಲಿ ಮುಸ್ಲಿಂ ಅಭ್ಯರ್ಥಿಯನ್ನೇ ಸ್ಪರ್ಧಿಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಅಂಜುಮನ್‌ ಎ–ರಾಯಚೂರು ಸಂಘಟನೆಯಿಂದ ಟಿಪ್ಪು ಸುಲ್ತಾನ್‌ ಉದ್ಯಾನವನದಲ್ಲಿ ಬುಧವಾರ ಪ್ರತಿಭಟನೆ ನಡೆಸಲಾಯಿತು.

1956ರ ರಿಂದ ಇಲ್ಲಿಯವರೆಗೆ ಕಾಂಗ್ರೆಸ್ ಪಕ್ಷವು ಮುಸ್ಲಿಂ ಸಮುದಾಯಕ್ಕೆ ಸ್ಪರ್ಧಿಸಲು ಅವಕಾಶ ನೀಡುತ್ತ ಬಂದಿದೆ. ಬಹುತೇಕ ಮುಸ್ಲಿಂಮರು ಜಾತ್ಯತೀತ ಮನೋಭಾವನೆಯಿಂದ ಕಾಂಗ್ರೆಸ್ ಪಕ್ಷವನ್ನೇ ಬೆಂಬಲಿಸುತ್ತ ಬಂದಿದ್ದಾರೆ. ರಾಯಚೂರು ನಗರ ವಿಧಾನಸಭಾ ಕ್ಷೇತ್ರದಲ್ಲಿ 2021ರ ಮತದಾರರ ಪಟ್ಟಿಯಂತೆ ಸುಮಾರು 89 ಸಾವಿರ ಮುಸ್ಲಿಂ ಮತದಾರರಿದ್ದು, ಬಹುತೇಕ ಸಂದರ್ಭದಲ್ಲಿ ಮುಸ್ಲಿಮರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸುತ್ತ ಬಂದಿದ್ದಾರೆ ಎಂದರು.

ರಾಯಚೂರು ನಗರದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಮುಸಲ್ಮಾನರಿಗೆ ಟಿಕೇಟ್ ಸಿಗುವದಿಲ್ಲ ಎಂದು ಕೆಲವು ಪಟ್ಟಭದ್ರ ಹಿತಾಸಕ್ತ ವ್ಯಕ್ತಿಗಳು ಪ್ರಚಾರ ಮಾಡುತ್ತಿರುವುದು ಸಮುದಾಯದ ಆತಂಕಕ್ಕೆ ಕಾರಣವಾಗಿದೆ. ಸಮುದಾಯದ ಭಾವನೆಗಳಿಗೆ ಧಕ್ಕೆ ಬರುವಂತಾಗಿದೆ ಎಂದು ಹೇಳಿದರು.

ADVERTISEMENT

ಮುಖಂಡರಾದ ರಝಾಕ್‌ ಉಸ್ತಾದ್‌, ಎಂ.ಕೆ.ಬಾಬರ್, ಹ್ಯಾರಿಸ್ ಸಿದ್ದೀಖಿ, ಅಬ್ದುಲ್ ಹೈ ಫೆರೋಜ್, ಶಾಹಾಜಾನ ಅನ್ಸಾರಿ, ಸೈಯದ ಖೈಸರ್ ಹುಸೇನಿ, ಶೇಖ್‌ ಮಾಸೂಮ ಮಹಿಬೂಬಅಲಿ, ಫೈಜಲ್ ಖಾನ್ ಮೊಹಮ್ಮದ ಅಲಿ ಇದ್ದರು.
ಎಐಸಿಸಿ ಹಾಗೂ ಕೆಪಿಸಿಸಿ ಮುಖಂಡರಿಗೆ ಮನವಿ ರವಾನಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.