ಮುದಗಲ್: ಇಲ್ಲಿಗೆ ಸಮೀಪದ ಛತ್ತರ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಪರ ಲಿಂಗಸುಗೂರು ಶಾಸಕ ಮಾನಪ್ಪ ವಜ್ಜಲ್ ಪ್ರಚಾರ ನಡೆಸಿದರು.
ಛತ್ತರ ಗ್ರಾಮದ ಮಾರುತೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಪ್ರಚಾರಕ್ಕೆ ಚಾಲನೆ ನೀಡಿದರು.
ನಾಗಲಾಪುರ, ಹೂನೂರು, ಬನ್ನಿಗೋಳ, ಆಮದಿಹಾಳ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಗ್ರಾಮಗಳಲ್ಲಿ ಶಾಸಕರು ಪ್ರಚಾರ ಮಾಡಿದರು.
‘ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನ ಮಂತ್ರಿ ಮಾಡಲು ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಅವರನ್ನು ಬೆಂಬಲಿಸಿ, ಹೆಚ್ಚು ಮತಗಳಿಂದ ಗೆಲ್ಲುವಂತೆ ಮಾಡಬೇಕು’ ಎಂದು ಮನವಿ ಮಾಡಿದರು.
ರಾಜಾ ಶ್ರೀನಿವಾಸ ನಾಯಕ, ರಾಜಾ ಸೋಮನಾಥ ನಾಯಕ, ಲಿಂಗಸುಗೂರು ಬಿಜೆಪಿ ಮಂಡಲ ಅಧ್ಯಕ್ಷ ಅಯ್ಯಪ್ಪ ಮಾಳೂರು, ಮುದಗಲ್ ಮಂಡಲ ಅಧ್ಯಕ್ಷ ಹುಲ್ಲೇಶ ಸಾಹುಕಾರ, ಕರಿಯಪ್ಪ ಯಾದವ, ರುದ್ರಗೌಡ ತುರಡಗಿ, ಫಕೀರಪ್ಪ ಕುರಿ ಸೇರಿ ಬಿಜೆಪಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.