ಸಿಂಧನೂರು: ‘ಮಹರ್ಷಿ ವಾಲ್ಮೀಕಿ ರಚಿಸಿರುವ ರಾಮಾಯಣ ಎಂಬ ಮಹಾಕಾವ್ಯ ಮನುಕುಲಕ್ಕೆ ದಾರಿದೀಪವಾಗಿದ್ದು, ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಬದುಕಿನ ಸಾರ್ಥಕತೆ ಮೆರೆಯಬೇಕು’ ಎಂದು ಮಾಜಿ ಸಚಿವ ವೆಂಕಟರಾವ್ ನಾಡಗೌಡ ಹೇಳಿದರು.
ಇಲ್ಲಿಯ ತಾಲ್ಲೂಕಾಡಳಿತ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಹಾಗೂ ವಾಲ್ಮೀಕಿ ನಾಯಕ ಸಮಾಜದ ಸಂಯುಕ್ತಾಶ್ರಯದಲ್ಲಿ ಮಿನಿವಿಧಾನಸೌಧ ಕಚೇರಿ ಹಾಗೂ ವಾಲ್ಮೀಕಿ ವೃತ್ತದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.
‘ಮಾನವೀಯತೆಯೇ ಧರ್ಮ ಎಂಬುದನ್ನು ಪ್ರತಿಪಾದಿಸಿದ ಮಹಾನ್ ದಾರ್ಶನಿಕ ವಾಲ್ಮೀಕಿ. ಅವರು ಯಾವುದೇ ಒಂದು ಸಮುದಾಯಕ್ಕೆ ಸೀಮಿತವಾದವರಲ್ಲ. ರಾಮಾಯಣ ಮಹಾಕಾವ್ಯ ಬರೆಯುವ ಮೂಲಕ ಸತತ ಶ್ರಮವಿದ್ದಲ್ಲಿ ಸಾಧನೆ ಮಾಡಬಹುದೆಂದು ತೋರಿಸಿಕೊಟ್ಟಿದ್ದಾರೆ. ಸಮಾಜದಲ್ಲಿ ಹೇಗೆ ಬದುಕಬೇಕೆಂಬ ಅಂಶಗಳಿವೆ’ ಎಂದು ವಿಶ್ಲೇಷಿಸಿದರು.
ವಿಧಾನ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ, ಬಿಜೆಪಿ ಮುಖಂಡ ಕೆ.ಕರಿಯಪ್ಪ, ತಹಶೀಲ್ದಾರ್ ಅರುಣ್ ಎಚ್.ದೇಸಾಯಿ ಮಾತನಾಡಿದರು.
ನಗರಸಭೆ ಅಧ್ಯಕ್ಷೆ ಮಂಜುಳಾ ಪ್ರಭುರಾಜ್, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಎಂ.ದೊಡ್ಡಬಸವರಾಜ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ, ನಗರಸಭೆ ಪೌರಾಯುಕ್ತ ಪಾಂಡುರಂಗ ಇಟಗಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಎಂ.ವೆಂಕಟೇಶ, ಪರಿಶಿಷ್ಟ ಪಂಗಡಗಳ ಕಲ್ಯಾಣಾಧಿಕಾರಿ ಭೀಮಣ್ಣ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಲಿಂಗಪ್ಪ ಅಂಗಡಿ, ಮುಖಂಡರಾದ ರಾಜಶೇಖರ ಪಾಟೀಲ, ಕೆ.ಭೀಮಣ್ಣ ವಕೀಲ, ರಾಜುಗೌಡ ಬಾದರ್ಲಿ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಚ್.ಎಫ್.ಮಸ್ಕಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಚಂದ್ರಶೇಖರ ಹಿರೇಮಠ, ವಾಲ್ಮೀಕಿ ನಾಯಕ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಆರ್.ತಿಮ್ಮಯ್ಯ ನಾಯಕ, ಮುಖಂಡರಾದ ಯಂಕೋಬ ನಾಯಕ ರಾಮತ್ನಾಳ, ಪರಮೇಶಪ್ಪ ದಢೇಸುಗೂರು, ಜೆ.ರಾಯಪ್ಪ ವಕೀಲ, ಅರುಣ್‍ಕುಮಾರ ಯಾಪಲಪರ್ವಿ, ಖಾಜಿಮಲಿಕ್ ವಕೀಲ, ವೀರೇಶ ಹಟ್ಟಿ, ಸೈಯ್ಯದ್ ಆಸೀಫ್, ಕೆ.ಮರಿಯಪ್ಪ, ಬಸವರಾಜ ಪಿ.ನಾಯಕ, ತಿಮ್ಮಣ್ಣ ನಾಯಕ ಮಲ್ಲಾಪುರ ಇದ್ದರು.ಈ ಸಮಾಜದಲ್ಲಿ ಮೌಲ್ಯಯುತವಾಗಿ ಹೇಗೆ ಬದುಕಬೇಕು ಎಂಬುದನ್ನು ರಾಮಾಯಣ ತಿಳಿಸಿಕೊಟ್ಟಿದ್ದು ಆ ದಾರಿಯಲ್ಲಿ ನಾವೆಲ್ಲರೂ ಸಾಗಬೇಕು.
ಈ ಸಮಾಜದಲ್ಲಿ ಮೌಲ್ಯಯುತವಾಗಿ ಹೇಗೆ ಬದುಕಬೇಕು ಎಂಬುದನ್ನು ರಾಮಾಯಣ ತಿಳಿಸಿಕೊಟ್ಟಿದ್ದು ಆ ದಾರಿಯಲ್ಲಿ ನಾವೆಲ್ಲರೂ ಸಾಗಬೇಕು.ಬಸನಗೌಡ ಬಾದರ್ಲಿ ವಿಧಾನ ಪರಿಷತ್ ಸದಸ್ಯ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.