ರಾಯಚೂರು: ತಾಲ್ಲೂಕಿನ ಯರಗೇರಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾಮಾಜಿಕ ಅರಣ್ಯ ವಲಯದಿಂದ ಬೆಳೆಸುತ್ತಿರುವ ಸಸ್ಯ ಕ್ಷೇತ್ರಕ್ಕೆ ವನಸಿರಿ ಫೌಂಡೇಷನ್ ಸಂಸ್ಥಾಪಕ ಅಧ್ಯಕ್ಷ ಅಮರೇಗೌಡ ಮಲ್ಲಾಪುರ ಹಾಗೂ ತಂಡದ ಸದಸ್ಯರು ಭೇಟಿ ನೀಡಿ ವೀಕ್ಷಿಸಿದರು.
ಸಾಮಾಜಿಕ ಅರಣ್ಯ ಇಲಾಖೆಯು ಮಹಾತ್ಮ ಗಾಂಧಿ ನರೇಗಾ ಯೋಜನೆಯಲ್ಲಿ ವಿವಿಧ ರೀತಿಯ ಸಸ್ಯ ಪ್ರಭೇದಗಳನ್ನು ಬೆಳೆಸಿದ್ದನ್ನು ವೀಕ್ಷಿಸಿದರು.
‘ರಾಯಚೂರು ಜಿಲ್ಲೆಯಲ್ಲಿ ಅರಣ್ಯ ಪ್ರದೇಶ ಹೆಚ್ಚಿಸುವ ದಿಸೆಯಲ್ಲಿ ₹100 ಕೋಟಿ ಕೊಡುವ ಭರವಸೆ ನೀಡಿದ್ದಾರೆ. ಅರಣ್ಯ ಇಲಾಖೆಯು ನರೇಗಾ ಯೋಜನೆಯಡಿ 1,800 ಗಿಡಗಳನ್ನು ಬೆಳೆಸುತ್ತಿದೆ. ಪರಿಸರ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ಜತೆಗೂಡಿ ಕೆಲಸ ಮಾಡಲಿದೆ’ ಎಂದು ಹೇಳಿದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಸುರೇಶ ಬಾಬು, ಉಪ ಅರಣ್ಯ ಅಧಿಕಾರಿ ನಾಗರಾಜ, ವನಸಿರಿ ಫೌಂಡೇಷನ್ ರಾಜ್ಯ ಗೌರವ ಅಧ್ಯಕ್ಷ ಶಂಕರಗೌಡ ಎಲೆಕೊಡ್ಲಿಗಿ, ಗಿರಿಸ್ವಾಮಿ ಹೆಡಗಿನಾಳ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.