ADVERTISEMENT

ವೀರಭದ್ರೇಶ್ವರ ಜಾತ್ರೆ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 24 ಮೇ 2022, 11:27 IST
Last Updated 24 ಮೇ 2022, 11:27 IST
ಕವಿತಾಳ ಸಮೀಪದ ಬಸಾಪುರದಲ್ಲಿ ವೀರಭದ್ರೇಶ್ವರ ಜಾತ್ರೆ ನಿಮಿತ್ತ ಮಂಗಳವಾರ ಕುಂಭದ ಮೆರವಣಿಗೆ ನಡೆಯಿತು
ಕವಿತಾಳ ಸಮೀಪದ ಬಸಾಪುರದಲ್ಲಿ ವೀರಭದ್ರೇಶ್ವರ ಜಾತ್ರೆ ನಿಮಿತ್ತ ಮಂಗಳವಾರ ಕುಂಭದ ಮೆರವಣಿಗೆ ನಡೆಯಿತು   

ಕವಿತಾಳ: ಮಸ್ಕಿ ತಾಲ್ಲೂಕಿನ ಬಸಾಪುರ ಗ್ರಾಮದಲ್ಲಿ ವೀರಭದ್ರೇಶ್ವರ ಜಾತ್ರೆ ನಿಮಿತ್ತ ಮಂಗಳವಾರ ರಥೋತ್ಸವ ಸಂಭ್ರಮದಿಂದ ಜರುಗಿತು.

ಜಾತ್ರೆ ನಿಮಿತ್ತ ಗಂಗಾಸ್ಥಳದಿಂದ ವೀರಭದ್ರೇಶ್ವರ ದೇವಸ್ಥಾನದ ವರೆಗೆ ಕಳಸ, ಕುಂಭಗಳ ಮೆರವಣಿಗೆ ವಿಜೃಂಭಣೆಯಿಂದ ನಡೆಯಿತು. ನಂದಿಕೋಲು, ಡೊಳ್ಳು ಕುಣಿತ, ಪುರವಂತಿಕೆ ಸೇವೆ ಮತ್ತು ಪಲ್ಲಕ್ಕಿ ಉತ್ಸವ ಮೆರವಣಿಗೆಗೆ ಮೆರಗು ನೀಡಿತು.

ವೀರಭದ್ರೇಶ್ವರ ಮೂರ್ತಿಗೆ ಮಹಾ ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಕುಂಕುಮಾರ್ಚನೆ, ಮಹಾ ಮಂಗಳಾರತಿ ಸೇರಿದಂತೆ ನೂತನ ರಥಕ್ಕೆ ವಿಶೇಷ ಪೂಜೆಯನ್ನು ನೆರವೇರಿಸಲಾಯಿತು.

ADVERTISEMENT

ಭಕ್ತರು ರಥಕ್ಕೆ ಉತ್ತತ್ತಿ, ಬಾಳೆಹಣ್ಣು ಎಸೆದು ಭಕ್ತಿ ಮೆರೆದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.